ETV Bharat / city

ಬಿಎಸ್​ವೈ ಆಹ್ವಾನಿಸಿದರೂ ಪದಗ್ರಹಣಕ್ಕೆ ಬಾರದ ಕೈ-ತೆನೆ ನಾಯಕರು!

author img

By

Published : Jul 27, 2019, 4:42 AM IST

ರಾಜಭವನದಲ್ಲಿ ನಡೆದ   ಸಮಾರಂಭಕ್ಕೆ ಮೈತ್ರಿ  ನಾಯಕರನ್ನು ಸ್ವತಃ   ಯಡಿಯೂರಪ್ಪ ಅವರೇ  ಆಹ್ವಾನಿಸಿದ್ದರು. ಆದರೆ ಕಾರ್ಯಕ್ರಮದಲ್ಲಿ ಗೈರಾಗುವ ಮೂಲಕ ಮೈತ್ರಿ ನಾಯಕರು ವಿರೋಧ ವ್ಯಕ್ತಪಡಿಸಿದವು.

ಪದಗ್ರಹಣ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್​. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭಕ್ಕೆ ಮೈತ್ರಿ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಕಾಣಿಸಲಿಲ್ಲ.

ರಾಜಭವನದಲ್ಲಿ ನಡೆದ ಸಮಾರಂಭಕ್ಕೆ ಮೈತ್ರಿ ನಾಯಕರನ್ನು ಸ್ವತಃ ಯಡಿಯೂರಪ್ಪ ಅವರೇ ಆಹ್ವಾನಿಸಿದ್ದರು. ಆದರೆ ಕಾರ್ಯಕ್ರಮದಲ್ಲಿ ಗೈರಾಗುವ ಮೂಲಕ ಮೈತ್ರಿ ನಾಯಕರು ವಿರೋಧ ವ್ಯಕ್ತಪಡಿಸಿದರು.

ಬಿಎಸ್​ವೈ ಪದಗ್ರಹಣ

ಪ್ರಮಾಣವಚನ ಸಮಾರಂಭಕ್ಕೂ ಮೊದಲು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಯಡಿಯೂರಪ್ಪ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನೂ ಆಹ್ವಾನಿಸುತ್ತೇನೆ ಎಂದು ಹೇಳಿದ್ದರು. ಆದರೆ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸಚಿವರಾದ ಎಂ.ಬಿ ಪಾಟೀಲ್, ಡಿ.ಕೆ ಶಿವಕುಮಾರ್ ಸೇರಿದಂತೆ ಯಾವೊಬ್ಬ ನಾಯಕರೂ ಆಗಮಿಸಿರಲಿಲ್ಲ. ಅಂತೆಯೆ ಜೆಡಿಎಸ್​ ಪಾಳೆಯದಿಂದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಯಾರೊಬ್ಬರೂ ಹಾಜರಿರಲಿಲ್ಲ. ಈ ಮಧ್ಯೆ ಅಚ್ಚರಿ ಮೂಡಿಸುವಂತೆ, ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್ ರಾಜಣ್ಣ ಹಾಗೂ ರೋಷನ್ ಬೇಗ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮೈತ್ರಿ ಸರ್ಕಾರ ಪತನಕ್ಕೆ ಬಿ.ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದ ಕೈ-ತೆನೆ ನಾಯಕರು ಯಡಿಯೂರಪ್ಪ ಪದಗ್ರಹಣ ಸಮಾರಂಭಕ್ಕೆ ಪಾಲ್ಗೊಳ್ಳದಿರಲು ಮೊದಲೇ ನಿರ್ಧರಿಸಿದ್ದರು. ಪಕ್ಷದ ಮುಖಂಡರಿಗೂ ಸೂಚನೆ ನೀಡಿ, ಸಮಾರಂಭದಲ್ಲಿ ಪಾಲ್ಗೊಳ್ಳದಂತೆ ಕಟ್ಟಪ್ಪಣೆ ವಿಧಿಸಿದ್ದರು ಎಂದು ಹೇಳಲಾಗ್ತಿದೆ.

Intro:newsBody:ಆಹ್ವಾನವಿತ್ತು, ಆದರೂ ಬಾರದ ಕೈ - ತೆನೆ ನಾಯಕರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರ ಆಹ್ವಾನವನ್ನು ಮೈತ್ರಿ ಪಕ್ಷಗಳು ತಿರಸ್ಕರಿಸಿರುವುದು ಗೋಚರಿಸಿತು.
ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಎಲ್ಲಾ ನಾಯಕರನ್ನು ತಮ್ಮ ಪದಗ್ರಹಣ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಯಾವ ಒಬ್ಬ ಹಿರಿಯ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಅಂತರ ಕಾಯ್ದುಕೊಂಡರು.
ಇಂದು ಬೆಳಿಗ್ಗೆ ಮಾತನಾಡಿದ್ದ ಯಡಿಯೂರಪ್ಪ ರಾಜಭವನದಲ್ಲಿ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡುತ್ತೇನೆ. ಪತ್ರ ಕೂಡ ಬರೆಯುತ್ತೇನೆ ಜೊತೆಗೆ ಕರೆಮಾಡಿಯೂ ಆಹ್ವಾನ ನೀಡುತ್ತೇನೆ ಎಂದು ಹೇಳಿದರು.
ಆದರೆ ಸಂಜೆ 6 ಗಂಟೆಗೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಮಾಜಿ ಸಚಿವರಾದ ಎಂಬಿ ಪಾಟೀಲ್ ಡಿಕೆ ಶಿವಕುಮಾರ್ ಸೇರಿದಂತೆ ಯಾವೊಬ್ಬ ನಾಯಕರು ಕಾಂಗ್ರೆಸ್ ನಿಂದ ಆಗಮಿಸಲಿಲ್ಲ. ಅದೇ ರೀತಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಯಾವೊಬ್ಬ ಜೆಡಿಎಸ್ ನಾಯಕರು ಪಾಲ್ಗೊಳ್ಳಲಿಲ್ಲ.
ಅಚ್ಚರಿಯ ಆಗಮನ
ಆದರೆ ಅಚ್ಚರಿ ಮೂಡಿಸುವ ರೀತಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ ಎನ್ ರಾಜಣ್ಣ ಹಾಗೂ ರೋಷನ್ ಬೇಗ್ ಸಮಾರಂಭದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು.
ಮೈತ್ರಿ ಸರ್ಕಾರ ಪತನಕ್ಕೆ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಯಡಿಯೂರಪ್ಪ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಮೊದಲೇ ನಿರ್ಧರಿಸಿದ್ದರು. ಅಲ್ಲದೆ ಪಕ್ಷದ ಪ್ರಮುಖರು ತಮ್ಮ ಮುಖಂಡರಿಗೆ ಸೂಚನೆ ನೀಡಿ ಯಾವುದೇ ಕಾರಣಕ್ಕೂ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಪಾಲ್ಗೊಂಡರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ಕೂಡ ನೀಡಲಾಗಿತ್ತು. ಈ ಹಿನ್ನೆಲೆ ಪಾಲ್ಗೊಳ್ಳುವ ಮನಸ್ಸಿದ್ದರೂ ಹಲವು ಮುಖಂಡರು ಕಾರ್ಯಕ್ರಮಕ್ಕೆ ಬರಲಿಲ್ಲ.Conclusion:news

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.