ETV Bharat / city

ಓರ್ವ ಮಹಿಳೆಗೆ ಅವಕಾಶ ನೀಡಿದ್ದಕ್ಕೆ ಕಾಂಗ್ರೆಸ್​ಗೆ​ ನಾನು ಚಿರಋಣಿ: ಆರ್​ಆರ್​ ನಗರದ ಪರಾಜಿತ ಅಭ್ಯರ್ಥಿ ಕುಸುಮಾ

author img

By

Published : Nov 11, 2020, 10:55 PM IST

ಆರ್​ಆರ್​ ನಗರ ಉಪಾಚುನಾವಣೆಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.

kusuma
ಸಿದ್ದರಾಮಯ್ಯ ಭೇಟಿ ಮಾಡಿದ ಕುಸುಮ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಇಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಸಿದ್ದರಾಮಯ್ಯ ಅವರ ನಿವಾಸಕ್ಕೆ ತಂದೆ ಹನುಮಂತರಾಯಪ್ಪ ಜತೆ ಆಗಮಿಸಿದ ಅವರು, ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಕುರಿತು ಚರ್ಚಿಸಿದರು. ಪ್ರಚಾರದ ವೇಳೆ ನೀಡಿದ ಸಹಕಾರ, ಪ್ರೋತ್ಸಾಹಕ್ಕೆ ಧನ್ಯವಾದ ಅರ್ಪಿಸಿದರು. 'ತಮ್ಮನ್ನು ಉಪಚುನಾವಣೆ ಸ್ಪರ್ಧೆಗೆ ಆಯ್ಕೆ ಮಾಡಿ, ಓರ್ವ ಮಹಿಳೆಗೆ ಅವಕಾಶ ನೀಡಿದ್ದಕ್ಕೆ ಪಕ್ಷಕ್ಕೆ ನಾನು ಋಣಿಯಾಗಿದ್ದೇನೆ. ಕ್ಷೇತ್ರದಲ್ಲಿ ಇದ್ದು ಜನರ ಸೇವೆ ಮಾಡುತ್ತೇನೆ' ಎಂದು ಭರವಸೆ ನೀಡಿದರು.

ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರತಿಪಕ್ಷದ ಪಾತ್ರದ ಕುರಿತು ಉಪಯುಕ್ತ ಸಲಹೆಗಳನ್ನು ಪಡೆದರು. ಕ್ಷೇತ್ರದಲ್ಲಿ ಪಕ್ಷದ ಬಲವರ್ಧನೆಯ ನಿಟ್ಟಿನಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು.

ಸ್ವಸ್ಥ, ಸದೃಢ ಸಮಾಜವನ್ನು ಕಟ್ಟಲು ಈ ಎಲ್ಲ ಸಲಹೆಗಳನ್ನು ಪಡೆದು ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ಕುಸುಮಾ ಅಭಯ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್​ಗಳಾದ ರಮೇಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹಮದ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.