ETV Bharat / city

ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ, ಅತಿವೃಷ್ಟಿ ವಿಚಾರ ಕಲಾಪದಲ್ಲಿ ಚರ್ಚೆಗೆ ಕಾಂಗ್ರೆಸ್ ನಿರ್ಧಾರ - ವಿಧಾನಸಭೆ ಸಭಾಧ್ಯಕ್ಷ ಕಾಗೇರಿಗೆ ಕಾಂಗ್ರೆಸ್‌ ಪತ್ರ

ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿ ವಿಷಯದ ಬಗ್ಗೆ ಚರ್ಚೆ ನಡೆಸಲು ನಿಲುವಳಿ ಸೂಚನೆಯನ್ನು ಕೊಡುತ್ತೇವೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಪತ್ರ ಬರೆದಿದೆ.

congress decided to discussion about flood issue in karnataka in assembly session
ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ, ಅತಿವೃಷ್ಟಿ ವಿಚಾರ ಕಲಾಪದಲ್ಲಿ ಚರ್ಚೆಗೆ ಕಾಂಗ್ರೆಸ್ ನಿರ್ಧಾರ
author img

By

Published : Dec 13, 2021, 1:22 PM IST

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿ ವಿಚಾರವಾಗಿ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 60ರ ಅಡಿ ಇಂದು ವಿಧಾನಸಭೆಯ ಅಧಿವೇಶನದಲ್ಲಿ ಪ್ರಶ್ನೋತ್ತರ, ಶೂನ್ಯವೇಳೆಯ ನಂತರ ವಿಷಯ ಪ್ರಸ್ತಾಪಿಸುತ್ತೇವೆ. ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿ ವಿಷಯದ ಬಗ್ಗೆ ನಿಲುವಳಿ ಸೂಚನೆಯನ್ನು ಕೊಡುತ್ತೇವೆ ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿರುವ ಪತ್ರದಲ್ಲಿ ತಿಳಿಸಿದೆ.

ಇತ್ತೀಚಿಗೆ ಸಂಭವಿಸಿದ ಪ್ರವಾಹ ಮತ್ತು ಅತಿವೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೆಳೆದು ನಿಂತ ರೈತರ ಬೆಳೆ ಸೇರಿದಂತೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಮನೆಗಳು ಹಾನಿಯಾಗಿವೆ/ನಾಶವಾಗಿವೆ. ಜನ, ಜಾನವಾರುಗಳಿಗೆ ಪ್ರಾಣ ಹಾನಿಯಾಗಿದೆ. ಇದರಿಂದಾಗಿ ಸಾವಿರಾರು ಕೋಟಿ ರೂ.ಗಳು ನಷ್ಟವಾಗಿದೆ. ಹಲವಾರು ಕಾರಣಗಳಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ರಾಜ್ಯದ ಜನತೆಯನ್ನು ಅತಿವೃಷ್ಟಿಯು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ.

ರಾಜ್ಯದ ಜನರ ಪಾಲಿಗೆ ಸಂಕಷ್ಟವನ್ನು ತಂದೊಡ್ಡಿರುವ ಈ ಸಮಸ್ಯೆಯನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಆದ್ದರಿಂದ ಅತ್ಯಂತ ಪ್ರಮುಖವಾದ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಲು ಇಂದು ನಿಲುವಳಿ ಸೂಚನೆಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ.

ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿಂದು ಆರಂಭವಾಗುತ್ತಿದ್ದಂತೆ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದಾದ ಬಳಿಕ ಇತರೆ ವಿಚಾರವನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಅತಿವೃಷ್ಟಿಯಿಂದಾಗಿ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಹಾನಿ ಆಗಿದೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ರಾಜಕೀಯ ದುರುದ್ದೇಶಪೂರಿತ.. ಅದಕ್ಕೆ ನಮ್ಮ ವಿರೋಧವಿದೆ - ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.