ETV Bharat / city

ಪಕ್ಷ, ನಾಯಕರ ವಿರುದ್ಧ ಇಬ್ರಾಹಿಂ ಮಾತನಾಡಿದ್ರೂ ಕಾಂಗ್ರೆಸ್‌ ಕ್ರಮ ಕೈಗೊಳ್ಳುತ್ತಿಲ್ಲ ಯಾಕೆ ಗೊತ್ತಾ? - ಬೆಂಗಳೂರು

ಪಕ್ಷ ಬಿಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಕಳೆದ ಒಂದು ವರ್ಷದಿಂದ ಜೆಡಿಎಸ್ ಮುಖಂಡರನ್ನು ಬಹಿರಂಗವಾಗಿಯೇ ಭೇಟಿ ಯಾಗುತ್ತಿರುವ ಕಾಂಗ್ರೆಸ್‌ನ ಎಂಎಲ್‌ಸಿ ಸಿಎಂ ಇಬ್ರಾಹಿಂ, ಇತ್ತೀಚೆಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇದನ್ನು ಕಂಡು ಕಾಣದಂತಿದೆ.

Congress did not Take any action against CM Ibrahim
ಪಕ್ಷ, ನಾಯಕರ ವಿರುದ್ಧ ಇಬ್ರಾಹಿಂ ಮಾತನಾಡಿದ್ರೂ ಕಾಂಗ್ರೆಸ್‌ ಕ್ರಮ ಕೈಗೊಳ್ಳುತ್ತಿಲ್ಲ ಯಾಕೆ ಗೊತ್ತಾ?
author img

By

Published : Sep 29, 2021, 4:08 AM IST

ಬೆಂಗಳೂರು: ನೇರ ಹಾಗೂ ನಿಷ್ಠುರವಾದ ಮಾತಿಗೆ ಹೆಸರಾಗಿರುವ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಜೆಡಿಎಸ್ ನಾಯಕರೊಂದಿಗೆ ನೇರವಾಗಿ ಸಂಪರ್ಕ ಮಾಡುತ್ತಿದ್ದರು ನಾಯಕರು ಮಾತ್ರ ಇವರ ನಡೆಗೆ ಮೌನವಹಿಸಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘನೆ ಆಗದಂತೆ ತಡೆಯಲು ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ನೇತೃತ್ವದಲ್ಲಿ ಕಾಂಗ್ರೆಸ್ ಶಿಸ್ತು ಸಮಿತಿ ರಚಿಸಲಾಗಿದ್ದು, ಇದಲ್ಲದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಯಾರೊಬ್ಬರು ಇದುವರೆಗೂ ಸಿಎಂ ಇಬ್ರಾಹಿಂಗೆ ತಾಕೀತು ಮಾಡುವ ಕಾರ್ಯ ಮಾಡಿಲ್ಲ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರವಾಗಿ ಕಾಂಗ್ರೆಸ್‌ನ ಕೆಲ ನಾಯಕರು ಹೇಳಿಕೆ ನೀಡಿದ್ದರು. ಶಾಸಕರಾದ ಜಮೀರ್ ಅಹಮ್ಮದ್‌, ಸೌಮ್ಯ ರೆಡ್ಡಿ, ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡುವ ನಿರ್ಧಾರ ಮಾಡಿತ್ತು. ಹೈಕಮಾಂಡ್ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ತಮ್ಮ ಬೆಂಬಲಿಗರು ಮುಂದಿನ ಸಿಎಂ ವಿಚಾರವಾಗಿ ಹೇಳಿಕೆ ನೀಡದಂತೆ ಸೂಚಿಸುವಂತೆ ತಿಳಿಸಿ ಪ್ರಹಸನಕ್ಕೆ ಕೊನೆ ಹಾಡಿತ್ತು.

ಆದರೆ ಪಕ್ಷ ಬಿಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಕಳೆದ ಒಂದು ವರ್ಷದಿಂದ ಜೆಡಿಎಸ್ ಮುಖಂಡರನ್ನು ಬಹಿರಂಗವಾಗಿಯೇ ಭೇಟಿ ಯಾಗುತ್ತಿರುವ ಸಿಎಂ ಇಬ್ರಾಹಿಂ ಇತ್ತೀಚೆಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದರು. ಜೆಡಿಎಸ್ ಸೇರ್ಪಡೆಯಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂಬ ಮಾಹಿತಿ ಸಹ ಇದ್ದು, ನಿರಂತರವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಇಬ್ರಾಹಿಂ ಭೇಟಿಮಾಡಿ ಸಮಾಲೋಚನೆ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷ ಮಾತ್ರ ಇದನ್ನು ಕಂಡು ಕಾಣದಂತಿದೆ.

ಕುತೂಹಲ ಮೂಡಿಸಿದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷವನ್ನು ಬಿಡುವುದಕ್ಕೆ ದೃಢ ನಿರ್ಧಾರ ಮಾಡಿರುವ ಸಿಎಂ ಇಬ್ರಾಹಿಂ ಅವನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ. ಆದರೆ ಪಕ್ಷದಲ್ಲಿ ತನಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಇಬ್ರಾಹಿಂ ಇಲ್ಲೇ ಉಳಿಯುವ ಯೋಚನೆ ಮಾಡಿಲ್ಲ. ಒಂದೊಮ್ಮೆ ಶಿಸ್ತುಕ್ರಮ ಕೈಗೊಂಡರೆ ಅಲ್ಪಸಂಖ್ಯಾತ ಮುಸ್ಲಿಂ ನಾಯಕರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂಬ ಅಪವಾದಕ್ಕೆ ಗುರಿಯಾಗುತ್ತೇವೆ ಎಂಬ ಆತಂಕವೂ ಕಾಂಗ್ರೆಸ್‌ಗೆ ಇದೆ.

ಪ್ರಸ್ತುತ ಪಕ್ಷದ ಅತಿದೊಡ್ಡ ಮತದಾರ ಸಮುದಾಯ ಇದಾಗಿದ್ದು, ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಇವರನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ ಎಂಬ ಮಾಹಿತಿ ಇದೆ. ವಿವಿಧ ಚುನಾವಣೆಗಳನ್ನು ಮುಂದಿಟ್ಟುಕೊಂಡು ಅನಗತ್ಯವಾಗಿ ಗೊಂದಲಕ್ಕೆ ಸಿಲುಕುವ ಬದಲು, ತಾವಾಗಿಯೇ ಪಕ್ಷ ಬಿಟ್ಟು ತೆರಳುವವರೆಗೂ ಇಬ್ರಾಹಿಂ ವಿರುದ್ಧ ಯಾವುದೇ ಕ್ರಮ ಅಥವಾ ಆಕ್ರೋಶದ ಹೇಳಿಕೆಗಳನ್ನು ನೀಡದಿರಲು ಕಾಂಗ್ರೆಸ್ ತೀರ್ಮಾನಿಸಿದೆ ಎಂಬ ಮಾಹಿತಿ ಇದೆ.

ಸದ್ಯದಲ್ಲೇ ಸಿಎಂ ಇಬ್ರಾಹಿಂ ಜೆಡಿಎಸ್‌ ಸೇರ್ಪಡೆ..!

ಸಾಮಾನ್ಯವಾಗಿ ಕಾಂಗ್ರೆಸ್‌ನಲ್ಲಿ ಶಿಸ್ತು ಸಮಿತಿ ಬಲವಾಗಿದ್ದರೂ ಸಹ ಇದುವರೆಗೂ ಯಾವುದೇ ಹಿರಿಯ ನಾಯಕರ ವಿರುದ್ಧ ಕ್ರಮ ಕೈಗೊಂಡ ಉದಾಹರಣೆಯಾಗಲಿ ಅಥವಾ ನೋಟಿಸ್ ನೀಡಿದ ಪ್ರಕರಣ ವಾಗಲಿ ಇಲ್ಲ. ಒಂದು ಎಚ್ಚರಿಕೆ ನೀಡುವ ಸಮಿತಿಯಾಗಿ ಮಾತ್ರ ಇದು ಕಾರ್ಯನಿರ್ವಹಿಸುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಹಾಗೂ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುವವರ ವಿರುದ್ಧ ಕ್ರಮಕ್ಕೆ ಸೀಮಿತವಾಗಿದೆ. ಸಿಎಂ ಇಬ್ರಾಹಿಂ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧವೇ ಸಾಕಷ್ಟು ಹೇಳಿಕೆ ನೀಡಿದ್ದಾರೆ. ಬಹಿರಂಗವಾಗಿ ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದರೂ ಅವರ ವಿರುದ್ಧ ಕ್ರಮ ಆಗಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದ ಇಬ್ರಾಹಿಂ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ: ಕುಮಾರಸ್ವಾಮಿಯನ್ನು ಭೇಟಿಯಾದ ಕಾಂಗ್ರೆಸ್‌ ಎಂಎಲ್‌ಸಿ ಸಿಎಂ ಇಬ್ರಾಹಿಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.