ETV Bharat / city

ಕಾಂಗ್ರೆಸ್ ವಿರುದ್ಧ ಸಚಿವ ಈಶ್ವರಪ್ಪ ಅವಾಚ್ಯ ಪದ ಬಳಕೆ ಆರೋಪ; ಹೈಗ್ರೌಂಡ್ಸ್ ಠಾಣೆಯಲ್ಲಿ ಕೇಸ್‌ ದಾಖಲು - ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆ

ಕಾಂಗ್ರೆಸ್‌ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಗೆ ಕೆಪಿಸಿಸಿ ಪ್ರಚಾರ ಸಮಿತಿ ದೂರು ನೀಡಿದೆ.

Congress filed a complaint against Minister KS Eshwarappa in high grounds police station, Bangalore
ಕಾಂಗ್ರೆಸ್ ವಿರುದ್ಧ ಸಚಿವ ಈಶ್ವರಪ್ಪ ಅವಾಚ್ಯ ಪದ ಬಳಕೆ ಆರೋಪ; ಹೈಗ್ರೌಂಡ್ಸ್ ಠಾಣೆಯಲ್ಲಿ ಕೆಎಸ್‌ಇ ವಿರುದ್ಧ ದೂರು
author img

By

Published : Aug 11, 2021, 3:15 AM IST

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಪಕ್ಷಗಳ ನಡುವಿದ ಗುದ್ದಾಟ ಸಾಮಾನ್ಯ. ನಾಯಕರ ನಡುವೆ ಮಾತಿನ ಗುದ್ದಾಟ ನಡೆದ್ರೆ, ಕಾರ್ಯಕರ್ತರ ನಡುವೆ ಹೆಚ್ಚಾಗಿ ಹೊಡೆದಾಟವೇ ನಡೆಯುತ್ತೆ. ಆದ್ರೀಗ ಬಿಜೆಪಿ ನಾಯಕನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿರುವ ಆರೋಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಂಗ್ರೆಸ್ ನಾಯಕರ ವಿರುದ್ಧ ಸಚಿವ ಈಶ್ವರಪ್ಪ ನಿನ್ನೆ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ನೀಡಿದ್ದು, ಕೂಡಲೇ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಈ ಬಗ್ಗೆ ಕೆಪಿಸಿಸಿ ಪ್ರಚಾರ ಸಮಿತಿಯ ಮನೋಹರ್ ಮಾತನಾಡಿ, ಈಶ್ವರಪ್ಪ ಬಾಯಿಂದ ಬಂದಿರುವ ಮಾತುಗಳನ್ನು ಹೇಳುವುದಕ್ಕೂ ಕೂಡ ಕಷ್ಟ. ಇದು ಬಿಜೆಪಿ ಸಂಸ್ಕೃತಿಯನ್ನ ತಿಳಿಸುತ್ತೆ. ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದು ಇದೇ ಮೊದಲೇನಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.