ETV Bharat / city

ಅತಿವೃಷ್ಟಿ ಸಮಸ್ಯೆಯನ್ನು ಸಚಿವರು ಸಭೆಯಲ್ಲಿ ಪ್ರಧಾನಿಗೆ ಮನದಟ್ಟು ಮಾಡಲಿ: ಸಿದ್ದರಾಮಯ್ಯ - Heavy rain fall in Karnataka

ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ನಡೆಸುತ್ತಿರುವ ರಾಜ್ಯ ಸಚಿವರ ಸಭೆಯಲ್ಲಿ ಕಳೆದ ವರ್ಷದ ಅತಿವೃಷ್ಟಿಯ ಬಾಕಿ ಪರಿಹಾರವನ್ನು ಬಿಡುಗಡೆ ಮಾಡುವಂತೆ ಸಚಿವರು ಕೇಳಬೇಕು. ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್​ ಮೂಲಕ ಒತ್ತಾಯಿಸಿದ್ದಾರೆ.

Opposition leader Siddaramaiah
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
author img

By

Published : Aug 10, 2020, 1:37 PM IST

ಬೆಂಗಳೂರು: ಪ್ರಧಾನಿ ಮೋದಿ ಜತೆ ಮಾತನಾಡುವ ಸಂದರ್ಭ ರಾಜ್ಯದ ಅತಿವೃಷ್ಟಿ ಸಮಸ್ಯೆಯನ್ನು ಸಮರ್ಪಕವಾಗಿ ವಿವರಿಸುವ ಕಾರ್ಯವನ್ನು ಸಚಿವರು ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನೆರೆ ಸಮಸ್ಯೆ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು ಎಂದಿದ್ದಾರೆ.

  • ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.
    ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
    ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು.
    1/10#FailedFloodMGmt

    — Siddaramaiah (@siddaramaiah) August 10, 2020 " class="align-text-top noRightClick twitterSection" data=" ">

ಹಳೆಯ ಬಾಕಿ ಕೇಳಿ

ಪ್ರಧಾನಿ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ₹1 ಲಕ್ಷ ಕೋಟಿ. ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ ₹50,000 ಕೋಟಿ. ಪರಿಹಾರ ಕೇಳಿದ್ದು ₹35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ₹1,860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದು ಹೇಳಿದ್ದಾರೆ.

  • ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ರೂ.1,00,000 ಕೋಟಿ
    ರಾಜ್ಯಸರ್ಕಾರದ ವರದಿ ಪ್ರಕಾರ ನಷ್ಟ- ರೂ50,000 ಕೋಟಿ.

    ಪರಿಹಾರ ಕೇಳಿದ್ದು
    ರೂ.35,000 ಕೋಟಿ.

    ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ.
    ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ.
    3/10#FailedFloodMGmt

ಕಳೆದ ವರ್ಷ ಮುಖ್ಯಮಂತ್ರಿ ಬಿಎಸ್​ವೈ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್​​ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ. ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಮೋದಿ ಅವರ ಗಮನಕ್ಕೆ ತರಬೇಕು. ಅವರು ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್, ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ. ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ ಎಂದು ದೂರಿದ್ದಾರೆ.

  • .@PMOIndia
    ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್,
    ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ @nsitharaman ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ.

    ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ.
    5/10#FailedFloodMGmt

ರಾಜ್ಯಕ್ಕೆ ಅನುದಾನ ಸಿಕ್ಕಿಲ್ಲ

ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ. ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ. 15ನೇ ಹಣಕಾಸು ಆಯೋಗ ರಾಜ್ಯಕ್ಕೆ ₹5,495 ಕೋಟಿ ವಿಶೇಷ ಅನುದಾನದ ಶಿಫಾರಸು ಮಾಡಿತ್ತು. ನಿರ್ಮಲಾ ಸೀತಾರಾಮನ್ ಅಡ್ಡಗಾಲು ಹಾಕಿ ಆ ಅನುದಾನ ರಾಜ್ಯಕ್ಕೆ ಸಿಗದಂತೆ ಮಾಡಿದ್ದಾರೆ. ಈ ಅನ್ಯಾಯವನ್ನು ಕೂಡ ರಾಜ್ಯದ ಸಚಿವರು ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದ್ದಾರೆ.

  • ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರ ಗುರುತಿಸಿರುವ ರೈತ ಫಲಾನುಭವಿಗಳ ಸಂಖ್ಯೆ ಕೇವಲ 52 ಲಕ್ಷ ಮಾತ್ರ. ರಾಜ್ಯ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರವೇ ರಾಜ್ಯದಲ್ಲಿರುವ ಒಟ್ಟು ರೈತ ಕುಟುಂಬಗಳ ಸಂಖ್ಯೆ 82 ಲಕ್ಷ.
    ಈ ಮಾಹಿತಿಯನ್ನು ಬಚ್ಚಿಟ್ಟು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ.
    6/10#FailedFloodMGmt

ಸರ್ವಪಕ್ಷ ನಿಯೋಗ ಕೊಂಡೊಯ್ಯಿರಿ

ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು. ಅವರ ಜೊತೆಗಿನ ರಾಜ್ಯದ ಸಚಿವರವ ಸಭೆ ಕಾಟಾಚಾರದ ಕಸರತ್ತು ಆಗಬಾರದು ಎಂದಿದ್ದಾರೆ.

  • ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ @PMOIndia ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು.

    ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ ಒತ್ತಾಯ ಮಾಡಬೇಕು.
    8/10#FailedFloodMGmt

ಮುಖ್ಯಮಂತ್ರಿಗಳು ತಕ್ಷಣ ಅಧಿಕಾರಿಗಳ ತಂಡವನ್ನು ಅತಿವೃಷ್ಟಿ ಪೀಡಿತ ಪ್ರದೇಶಕ್ಕೆ ಕಳಿಸಿ ನಷ್ಟದ ಅಧ್ಯಯನ ಮಾಡಿಸಿ ಪ್ರಧಾನಿಗೆ ಕಳಿಸಿಕೊಟ್ಟು ನ್ಯಾಯಯುತ ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಈವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು ಮೋದಿ ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ ಸಿಎಂ ಇಲ್ಲವೇ ಸಚಿವರಿಗಿಲ್ಲ. ಇದಕ್ಕಾಗಿ, ಹೆಚ್ಚಿನ ಪರಿಹಾರ ಕೋರಲು ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು ಎಂದು ಸಲಹೆ ಇತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.