ETV Bharat / city

ನಾಳೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರ ಭೇಟಿ ; ಸಚಿವ ಸಂಪುಟದಿಂದ ಈಶ್ವರಪ್ಪ ವಜಾಗೆ ಒತ್ತಾಯ - KS Eshwarappa demanding dismissal of Congress governor

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ನಾಳೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ..

Rural Development Minister KS Eshwarappa to be sacked from Cabine
ನಾಳೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರ ಭೇಟಿ; ಈಶ್ವರಪ್ಪ ವಜಾಗೆ ಒತ್ತಾಯ
author img

By

Published : Apr 12, 2022, 7:41 PM IST

ಬೆಂಗಳೂರು : ನಾಳೆ ಬೆಳಗ್ಗೆ 10 ಗಂಟೆಗೆ ರಾಜ ಭವನಕ್ಕೆ ಕಾಂಗ್ರೆಸ್ ನಿಯೋಗ ಭೇಟಿ ನೀಡಲಿದೆ. ಈಶ್ವರಪ್ಪರನ್ನ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಲಿದೆ. 40% ಕಮಿಷನ್​ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಕಾಂಗ್ರೆಸ್‌ ನಾಯಕರು ಮನವಿ ಸಲ್ಲಿಸಲಿದ್ದಾರೆ.

ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ನಾಳೆ ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದೆ. ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಆರ್‌ ಧೃವನಾರಾಯಣ್, ಸತೀಶ್ ಜಾರಕಿಹೊಳಿ ಇರಲಿದ್ದಾರೆ.

ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಕೋಮು ಗಲಭೆಗಳ ಮೂಲಕ ಬೊಮ್ಮಾಯಿ ಅವರು ಅಡಗಿ ಕುಳಿತುಕೊಳ್ಳುತ್ತಿರುವುದೇಕೆ? ಬೊಮ್ಮಾಯಿ ಅವರು ಹಾಗೂ ಬಿಜೆಪಿಯ ಗೂಂಡಾಗಳು ಅಲ್ಪಸಂಖ್ಯಾತರ ವಿರುದ್ಧ ನಿತ್ಯ ದಾಳಿ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಬಿಎಸ್​ವೈ ಭೇಟಿ ಮಾಡಿ ಚರ್ಚಿಸಿದ ಸಿಎಂ : ಇಂದೇ ರಾಜೀನಾಮೆ ನೀಡ್ತಾರಾ ಈಶ್ವರಪ್ಪ?

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.