ETV Bharat / city

ಬಿಬಿಎಂಪಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನಾಯಕರ ಮಹತ್ವದ ಚರ್ಚೆ

author img

By

Published : Jun 20, 2022, 8:45 AM IST

ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಬೇಕಾದರೂ ಬಿಬಿಎಂಪಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಗೆಲುವಿಗೆ ಅಗತ್ಯ ಇರುವ ಕಾರ್ಯತಂತ್ರ ರೂಪಿಸುವ ಸಂಬಂಧ ಹಾಗೂ ಕಾರ್ಯಕರ್ತರ ಮನೋಬಲ ಹೆಚ್ಚಿಸಲು ಕಾಂಗ್ರೆಸ್ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿನ್ನೆ ಸಭೆ ನಡೆಸಿದರು.

Congress Leaders meeting Over Bbmp Elections
ಕಾಂಗ್ರೆಸ್ ನಾಯಕರ ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್​​ನಲ್ಲಿ ಕಾಂಗ್ರೆಸ್ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿನ್ನೆ(ಭಾನುವಾರ) ಮಹತ್ವದ ಸಭೆ ನಡೆಸಿದರು. ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಬೇಕಾದರೂ ಬಿಬಿಎಂಪಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಗೆಲುವಿಗೆ ಅಗತ್ಯವಿರುವ ಕಾರ್ಯತಂತ್ರ ರೂಪಿಸುವ ಸಂಬಂಧ ಹಾಗೂ ಕಾರ್ಯಕರ್ತರ ಮನೋಬಲ ಹೆಚ್ಚಿಸಲು ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತು ಈ ಸಂದರ್ಭ ಚರ್ಚಿಸಲಾಯಿತು.

ಬಿಬಿಎಂಪಿ ಮರುವಿಂಗಡಣೆ ಮಾಡಿ ಹೆಚ್ಚುವರಿ ವಾರ್ಡ್​ಗಳನ್ನು ರೂಪಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೇ, ಅತ್ಯಂತ ಪ್ರತಿಷ್ಠೆಯ ಸಂಕೇತವಾಗಿದೆ. ಕಳೆದ ಅವಧಿಯಲ್ಲಿ ಐದು ವರ್ಷಗಳ ಪೈಕಿ ನಾಲ್ಕು ವರ್ಷ ಜೆಡಿಎಸ್ ಜೊತೆ ಮೈತ್ರಿ ಅಧಿಕಾರ ನಡೆಸಿದ ಕಾಂಗ್ರೆಸ್​​ಗೆ ಈ ಸಾರಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಗುರಿ ಇದೆ. ಆದರೆ, ಈ ಮಾರ್ಗ ಅಷ್ಟು ಸುಗಮವಾಗಿಲ್ಲ.

ಆಡಳಿತ ಪಕ್ಷವಾಗಿರುವ ಬಿಜೆಪಿಯ ಪ್ರತಿಸ್ಪರ್ಧೆ ದೊಡ್ಡದಿದೆ. ಜೆಡಿಎಸ್ ಪಕ್ಷ ಸಹ ನಿರ್ಣಾಯಕ ಪಾತ್ರ ವಹಿಸಲಿದೆ. 2023ರಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಕಾಂಗ್ರೆಸ್​​ಗೆ ಹೆಚ್ಚಿನ ಸ್ಥಾನಗಳು ಬಿಬಿಎಂಪಿ ಚುನಾವಣೆ ಗೆಲುವು ಅತ್ಯಂತ ಅನುಕೂಲಕರವಾಗಿ ಲಭಿಸಲಿದೆ. ರಾಜ್ಯದ ರಾಜಧಾನಿ ತಮ್ಮ ಹಿಡಿತದಲ್ಲಿದ್ದರೆ, 224 ಕ್ಷೇತ್ರಗಳ ಪೈಕಿ ಪ್ರಮುಖ 28 ಕ್ಷೇತ್ರಗಳನ್ನು ಗೆಲ್ಲುವುದು ಸುಲಭವಾಗಲಿದೆ.

ಅಲ್ಲದೇ, ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಬಿಎಂಪಿ ಹಿಡಿತ ಕಾಂಗ್ರೆಸ್​​ಗೆ ಲಭಿಸಿದರೆ ಅದೊಂದು ಧನಾತ್ಮಕ ಪರಿಣಾಮವನ್ನು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ಬೀರಲಿದೆ ಎಂಬುದು ಕಾಂಗ್ರೆಸ್ ನಾಯಕರ ಆಶಯವಾಗಿದೆ.

ಈ ಹಿನ್ನೆಲೆ ಬಿಬಿಎಂಪಿ ಚುನಾವಣೆ ಗೆಲುವನ್ನ ಅತ್ಯಂತ ಪ್ರಮುಖವಾಗಿ ಪರಿಗಣಿಸಿ ಸಭೆಯಲ್ಲಿ ಚರ್ಚಿಸಲಾಗಿದೆ. ಮುಂಬರುವ ದಿನಗಳಲ್ಲಿ ಕೈಗೊಳ್ಳಬಹುದಾದ ಸಭೆಗಳು ಹಾಗೂ ನಿರ್ಣಯಗಳ ಕುರಿತು ಸಹ ಇಂದು ಬೆಳಕು ಚೆಲ್ಲಲಾಗಿದೆ.

ದೆಹಲಿ ವಿಚಾರ ಚರ್ಚೆ: ಕಳೆದ ವಾರ ದೆಹಲಿಯಲ್ಲಿ ಸಂಸದ ಡಿ.ಕೆ ಸುರೇಶ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಮೇಲೆ ನಡೆದ ಪೊಲೀಸರ ದೌರ್ಜನ್ಯ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆದಿದೆ. ರಾಷ್ಟ್ರೀಯ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಯಾವ ರೀತಿಯ ಹೋರಾಟವನ್ನು ಕೈಗೊಳ್ಳಬಹುದು ಎಂಬ ಕುರಿತು ಸಮಾಲೋಚನೆ ನಡೆದಿದೆ.

ಅಲ್ಲಿ ಪೊಲೀಸರನ್ನು ಬಳಸಿಕೊಂಡು ಕಾಂಗ್ರೆಸ್ ನಾಯಕರನ್ನ ಬೆದರಿಸುವ ತಂತ್ರವನ್ನು ಕೇಂದ್ರ ಸರ್ಕಾರ ಮಾಡಿದ್ದು, ಮುಂಬರುವ ದಿನಗಳಲ್ಲಿ ಇದನ್ನು ಖಂಡಿಸಿ ಕೈಗೊಳ್ಳಬಹುದಾದ ಹೋರಾಟದ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜತೆ ಡಿಕೆಶಿ ಚರ್ಚೆ ನಡೆಸಿದರು. ಈ ವಿಚಾರವನ್ನು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದು ಮುಂದಿನ ಹೋರಾಟ ರೂಪಿಸುವ ಭರವಸೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವ, ಶಾಸಕರಾದ ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಅರ್ಶದ್ ರಿಜ್ವಾನ್, ಹ್ಯಾರಿಸ್, ಸೌಮ್ಯರೆಡ್ಡಿ, ಆನೇಕಲ್ ಶಿವಣ್ಣ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ: ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.