ETV Bharat / city

ದಿಲ್ಲಿ ವರಿಷ್ಠರ ಸಭೆಯಲ್ಲಿ ರಾಜ್ಯ ನಾಯಕರಿಗೆ ಒಗ್ಗಟ್ಟಿನ ಮಂತ್ರ ಬೋಧನೆ - ಪಕ್ಷ ಸಂಘಟನೆ ಮತ್ತು ಚುನಾವಣಾ ತಯಾರಿಯ ಬಗ್ಗೆ ಚರ್ಚೆ

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರಿಗೂ ಅನ್ಯಾಯವಾಗದಂತೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಿ ಕಳುಹಿಸುವ ನಿಟ್ಟಿನಲ್ಲಿಯೂ ಶ್ರಮವಹಿಸಿ ಎಂದು ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.

congress-leaders
ವರಿಷ್ಠರ ಸಭೆಯಲ್ಲಿ
author img

By

Published : Feb 25, 2022, 8:33 AM IST

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಚುನಾವಣಾ ತಯಾರಿಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಿನ್ನೆ(ಗುರುವಾರ) ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನವದೆಹಲಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಾಗಿ ಹೋರಾಡುವಂತೆ ಸೂಚಿಸಲಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಕಂಡುಬರಬಾರದು. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಸಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಅಧಿಕಾರಕ್ಕೆ ತರುವಲ್ಲಿ ಶ್ರಮಿಸುವ ನಾಯಕರಿಗೆ ಅವರ ಪ್ರಯತ್ನಕ್ಕೆ ತಕ್ಕ ಸ್ಥಾನಮಾನ ಸಿಗಲಿದೆ ಎಂದು ಹೈಕಮಾಂಡ್​ ಸೂಚಿಸಿದೆ.

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರಿಗೂ ಅನ್ಯಾಯವಾಗದಂತೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಿ ಕಳುಹಿಸುವ ನಿಟ್ಟಿನಲ್ಲಿಯೂ ಶ್ರಮವಹಿಸಿ ಎಂದು ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರರು ಭಾಗವಹಿಸಿದ್ದರು.

ನವದೆಹಲಿಯಲ್ಲಿ ವರಿಷ್ಠರ ಜೊತೆ ಸಭೆ ನಡೆಸಿದ ರಾಜ್ಯ ಕಾಂಗ್ರೆಸ್​ ನಾಯಕರು

2 ಗಂಟೆ ನಡೆದ ಸಭೆ: ಸುಮಾರು 2 ಗಂಟೆ ನಡೆದ ಸಭೆಯಲ್ಲಿ ರಾಜ್ಯದ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಯಾವುದೇ ಒಳಜಗಳ ಇಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣಾ ಎದುರಿಸಲಿದ್ದೇವೆ. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತಂದು ಹೈಕಮಾಂಡ್‌ಗೆ ಅರ್ಪಿಸುತ್ತೇವೆ ಎಂದಿದ್ದೇವೆ. ಸದ್ಯದ ರಾಜ್ಯದ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆದಿದೆ ಎಂದು ವಿವರಿಸಿದರು.

ಮೇಕೆದಾಟು ಹೋರಾಟಕ್ಕೆ ರಣದೀಪ್ ಸುರ್ಜೆವಾಲಾ ಮರು ಚಾಲನೆ ನೀಡಲಿದ್ದಾರೆ. ಫೆಬ್ರವರಿ 27ರಿಂದ ಮಾರ್ಚ್ 3 ರವರೆಗೆ ಎರಡನೇ ಹಂತದ ಪಾದಯಾತ್ರೆ ನಡೆಯಲಿದ್ದು, ರಾಮನಗರದಿಂದ ಹೊರಟು 2 ದಿನಗಳ ಬಳಿಕ ಬೆಂಗಳೂರು ನಗರ ಪ್ರವೇಶಿಸುವ ಪಾದಯಾತ್ರೆ ನಗರದಲ್ಲಿ 3 ದಿನ ವಿವಿಧ ನಡೆಯಲಿದೆ. ಕಡೆಯ ದಿನ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಸಭೆಯ ನಂತರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮಾತನಾಡಿ, ರಾಜ್ಯದಲ್ಲಿ 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಬಗ್ಗೆ ಚರ್ಚೆ ನಡೆಸಲಾಗಿದೆ. ಬೊಮ್ಮಾಯಿ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಸರ್ಕಾರ ಶೇ. 40 ರಷ್ಟು ಕಮಿಷನ್ ಸರ್ಕಾರ. ಈ ಎಲ್ಲಾ ವಿಚಾರವನ್ನು ರಾಜ್ಯದ ಜನರ ಗಮನಕ್ಕೆ ತರುವ ಕೆಲಸ‌ ಕಾಂಗ್ರೆಸ್ ಮಾಡಲಿದೆ. ಒಗ್ಗಟ್ಟಿನಿಂದ ಬಿಜೆಪಿ ವಿರುದ್ದ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಇದನ್ನೂ ಓದಿ: ಹರ್ಷನ ಮರಣ ವ್ಯರ್ಥ ಆಗಲು ಬಿಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.