ETV Bharat / city

ಆರೋಗ್ಯ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ಆರೋಪ: ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ

author img

By

Published : Jul 20, 2020, 3:13 PM IST

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್​ ನಾಯಕರು, ವೆಂಟಿಲೇಟರ್ ಖರೀದಿ ಹಗರಣ, ಮೆಡಿಕಲ್ ಕಿಟ್ ಖರೀದಿ ಅವ್ಯವಹಾರ, ಬಿಬಿಎಂಪಿ ಆಯುಕ್ತರ ವರ್ಗಾವಣೆ ಕುರಿತು ಸ್ಪಷ್ಟತೆ ನೀಡುವಂತೆ ಆಗ್ರಹಿಸಿದ್ದಾರೆ.

congress-leaders-statement-on-government
ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಯು.ಟಿ.ಖಾದರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವೆಂಟಿಲೇಟರ್ ಖರೀದಿ ಹಗರಣ ವಿಚಾರದ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ. ಇಲ್ಲಿಯವರೆಗೆ ನಾಲ್ಕು ತಿಂಗಳಾಗಿದೆ. 70 ಸಾವಿರ ಮಂದಿಯ ಗಂಟಲು ದ್ರವದ ಪರೀಕ್ಷಾ ವರದಿ ಬರಬೇಕು. ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದೆ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡ್ತಾರೆ. ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡೂ ಎದುರಾಗಿದೆ. ಪ್ರತಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಟ ಮಾಡ್ತೇವೆ. ಜನಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ. ಜನರಿಗಾಗಿ ಸಹಾಯವಾಣಿ ಆರಂಭಿಸುತ್ತೇವೆ ಎಂದರು.

ಉತ್ತರ ಕೊಡಲಿ

ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ನಾವು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದೆವು. ಅವರು ಮೊದಲು ಮೆಡಿಕಲ್ ಕಿಟ್ ಖರೀದಿ ಅವ್ಯವಹಾರದ ಬಗ್ಗೆ ಉತ್ತರ ಕೊಡಲಿ. ಕೊರೊನಾದಲ್ಲಿ ಮಾಡಿರುವ ಕರ್ಮಕಾಂಡ ಬಯಲಾಗ್ತಿದೆ. ರಾಜ್ಯದ ಜನರಿಗೆ ಎಲ್ಲವೂ ಈಗ ಅರ್ಥವಾಗ್ತಿದೆ. ಬಿಬಿಎಂಪಿ ಆಯುಕ್ತರ ವರ್ಗಾವಣೆ ಆಗಿದೆ. ಅವರು ಜನರ ಬಳಿ ಹೋಗಿ ಮನವರಿಕೆ ಮಾಡಿಕೊಡ್ತಿದ್ರು. ಪ್ರಮಾಣಿಕ ಪ್ರಯತ್ನ ಮಾಡಿದ್ರು ಅನ್ನಿಸಿದೆ. ಇದರ ಬಗ್ಗೆ ನಾನು ಹೆಚ್ಚೇನು ಮಾತನಾಡಲ್ಲ ಎಂದರು.

ಸಮಸ್ಯೆ ನಿವಾರಿಸಲಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ತಮಿಳುನಾಡು ಸರ್ಕಾರ 4 ಲಕ್ಷ 80 ಸಾವಿರಕ್ಕೆ ವೆಂಟಿಲೇಟರ್ ಖರೀದಿ ಮಾಡಿದೆ. ಆದರೆ ನಮ್ಮ ಸರ್ಕಾರ 18 ಲಕ್ಷಕ್ಕೆ ಖರೀದಿ ಮಾಡಿದೆ. ಬಿಬಿಎಂಪಿ ಆಯುಕ್ತರನ್ನ ವರ್ಗಾವಣೆ ಮಾಡಲಾಗಿದೆ. ಅವ್ಯವಹಾರವನ್ನ ಮುಚ್ಚಿಹಾಕುವ ಪ್ರಯತ್ನ ಮಾಡಲಾಗ್ತಿದೆ. ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು. ಬೆಡ್​ಗಳ ಕೊರತೆ ಕೂಡ ಹೆಚ್ಚಾಗಿದೆ. ಇದನ್ನ ನಿವಾರಿಸುವ ಕೆಲಸ ಮಾಡಬೇಕು. ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ ಎಂದು ಆರೋಪಿಸಿದರು.

ತನಿಖೆ ಆಗಲಿ

ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿ, ಆಡಳಿತ ಪಕ್ಷ ಪ್ರತಿಪಕ್ಷದ ವಿರುದ್ಧ ರಾಜಕೀಯ ಟೀಕೆ ಟಿಪ್ಪಣಿ ಮಾಡಲ್ಲ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಆರೋಪ ಕೇಳಿ ಬರ್ತಿದೆ. ಹೈಕೋರ್ಟ್​ಗೆ ಅಫಿಡವಿಟ್ ಸಲ್ಲಿಕೆಯಾಗಿದೆ. ಕಿಟ್ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಇದರ ಬಗ್ಗೆ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.