ಬೆಂಗಳೂರು: ರೈತ ಸಂಘಟನೆಗಳು ಕಾರ್ಯ ಕೊಟ್ಟಿರುವ ಭಾರತ್ ಬಂದ್ಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷ ವಿಧಾನಸೌಧದಲ್ಲಿ ಪ್ರತಿಭಟನೆಗೆ ನಿರ್ಧರಿಸಿದೆ. ಮಂಗಳವಾರ ಬೆಳಗ್ಗೆ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ರಾಜ್ಯ ನಾಯಕರು ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.
ಈ ಮೂಲಕ ರೈತರ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ನಿಲುವು ಖಂಡಿಸಿ ರೈತ ಸಂಘಟನೆಗಳು ಬಂದ್ಗೆ ಕರೆ ಕೊಟ್ಟಿವೆ. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಬೆಂಬಲ ನೀಡುತ್ತಿದ್ದಾರೆ.
ಇದನ್ನೂ ಓದಿ: ಭಾರತ್ ಬಂದ್: ನಾಳೆ ಏನಿರುತ್ತೆ, ಏನಿರಲ್ಲಾ?
ಗಾಂಧಿ ಪ್ರತಿಮೆ ಬಳಿ ಇಂದು ಬೆಳಗ್ಗೆ 10.30ಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸುವ ಕಾಂಗ್ರೆಸ್ ನಾಯಕರು ನಂತರ ವಿಧಾನಸಭೆ ಚಳಿಗಾಲದ ಅಧಿವೇಶನದ 2ನೇ ದಿನದ ಕಲಾಪದಲ್ಲಿ ಪಾಲ್ಗೊಳ್ಳಬೇಕೋ, ಬೇಡವೋ ಎಂಬ ನಿರ್ಧಾರ ಕೈಗೊಳ್ಳಲಿದ್ದಾರೆ.
ಎಲ್ಲಾ ಜಿಲ್ಲಾ ಘಟಕಗಳಿಗೆ ಬಂದ್ಗೆ ಬೆಂಬಲಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಎರಡು ದಿನಗಳ ಹಿಂದೆಯೇ ಕೊಟ್ಟಿದ್ದು, ಬಂದ್ ಯಶಸ್ವಿಗೊಳಿಸುವಂತೆ ಸೂಚಿಸಿದ್ದಾರೆ.