ಬೆಂಗಳೂರು : ಹಲವು ಮಹತ್ವದ ವಿಚಾರಗಳ ಚರ್ಚೆಗಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಬುಧವಾರ ಸಂಜೆ 6.30ಕ್ಕೆ ಶಾಸಕಾಂಗ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದೆ.

ಸಭೆಗೆ ಶಾಸಕರು ತಪ್ಪದೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ. ಒನ್ ನೇಷನ್ ಒನ್ ಎಲೆಕ್ಷನ್, ರಾಜ್ಯ ಬಜೆಟ್ ಜೊತೆಗೆ ಎಪಿಎಂಸಿ ಕಾಯ್ದೆ ವಿರುದ್ಧ ಜನ ಆಂದೋಲನ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಐವರು ಕಾರ್ಯಾಧ್ಯಕ್ಷ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.