ETV Bharat / city

ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಗೆ ನಿಯೋಜಿತರಾದ ವೀಕ್ಷಕರ ಸಭೆ

author img

By

Published : Nov 10, 2019, 2:01 PM IST

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಿಧಾನಸಭೆ ಉಪಚುನಾವಣೆ ವೀಕ್ಷಕರ ಸಭೆ ನಡೆಯುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಗೆ ನಿಯೋಜಿತರಾದ ವೀಕ್ಷಕರ ಸಭೆ ಆರಂಭ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುವ ವಿಧಾನಸಭೆ ಉಪಚುನಾವಣೆ ವೀಕ್ಷಕರ ಸಭೆ ನಡೆಯುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆಗೆ ನಿಯೋಜಿತರಾದ ವೀಕ್ಷಕರ ಸಭೆ ಆರಂಭ

ಮುಂಬರುವ ವಿಧಾನಸಭೆ ಉಪಚುನಾವಣೆ ಗೆಲುವನ್ನ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, 15 ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವಿನ ಗುರಿ ಸಾಧಿಸುವ ನಿರೀಕ್ಷೆ ಇರಿಸಿಕೊಂಡಿದೆ. ಕಾಂಗ್ರೆಸ್ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಜೆಡಿಎಸ್ ಹಾಗೂ ಬಿಜೆಪಿಯನ್ನು ಹೇಗೆ ಎದುರಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಶಾಸಕರ ರಾಜೀನಾಮೆ ಹಾಗೂ ನಂತರ ಅನರ್ಹತೆಯಿಂದ ತೆರವಾಗಿರುವ ಈ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಿ ಗೆಲುವಿನ ರೂಪುರೇಷೆ ಹೆಣೆಯುತ್ತಿದೆ.

Intro:newsBody:ವಿವಿಧ ಜಿಲ್ಲೆಗಳ ವ್ಯಾಪ್ತಿಯ ಉಪಚುನಾವಣೆಗೆ ನಿಯೋಜಿತರಾದ ವೀಕ್ಷಕರ ಸಭೆ ಆರಂಭ

ಬೆಂಗಳೂರು: ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುವ ವಿಧಾನಸಭೆ ಉಪಚುನಾವಣೆ ವೀಕ್ಷಕರ ಸಭೆ ಆರಂಭವಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆಯುತ್ತಿದೆ.
ಮುಂಬರುವ ವಿಧಾನಸಭೆ ಉಪಚುನಾವಣೆ ಗೆಲುವನ್ನ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ 15 ಕ್ಷೇತ್ರಗಳ ಪೈಕಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವಿನ ಗುರಿ ಸಾಧಿಸುವ ನಿರೀಕ್ಷೆ ಇರಿಸಿಕೊಂಡಿದೆ. ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಈ ಸಾರಿ ಎಲ್ಲಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಪೈಪೋಟಿಯನ್ನು ಹೇಗೆ ಎದುರಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಶಾಸಕರ ರಾಜೀನಾಮೆ ಹಾಗೂ ನಂತರ ಅನರ್ಹತೆಯಿಂದ ತೆರವಾಗಿರುವ ಈ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ಹಮ್ಮಿಕೊಂಡಿರುವ ಪಕ್ಷ ಇಂದು ಮಹತ್ವದ ಸಭೆ ನಡೆಸಿ ಗೆಲುವಿನ ರೂಪುರೇಷೆ ಹೆಣೆದಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಬೆಳಗಾವಿ, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಸಂಬಂಧ ನೇಮಕಗೊಂಡಿರುವ ವೀಕ್ಷಕರ ಸಭೆಯಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಎಲ್. ಹನುಮಂತಯ್ಯ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಡಿ.ಕೆ. ಶಿವಕುಮಾರ್, ರಾಜ್ಯಸಭೆ ಸದಸ್ಯ ಬಿಕೆ ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.