ಬೆಂಗಳೂರು: ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಮೂರ್ನಾಲ್ಕು ದೂರುಗಳನ್ನು ನೀಡಿದ ಹಿನ್ನೆಲೆಯಲ್ಲಿ ನನ್ನ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್ ತಿಳಿಸಿದರು.
ಇಡಿ ಅಧಿಕಾರಿಗಳ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮೊದಲು ಮನೆ ನಿರ್ಮಾಣಕ್ಕೆ ಮಾಡಿದ ವೆಚ್ಚದ ಬಗ್ಗೆ ಅಧಿಕಾರಿಗಳು ಮಾಹಿತಿ ಕೇಳಿದ್ರು. 2006 ರಲ್ಲಿ ನಾನು ಈ ಜಾಗ ಖರೀದಿಸಿದ ದಾಖಲೆಗಳು ಸೇರಿದಂತೆ ಎಲ್ಲಾ ಅಗತ್ಯ ಮಾಹಿತಿಯನ್ನು ಒದಗಿಸಿದ್ದೇನೆ. ಬ್ಯಾಂಕ್ಗೆ ಹೋಗಿ ನನ್ನ ಹಣಕಾಸಿನ ವ್ಯವಹಾರದ ಬಗ್ಗೆ ಸಹ ಮಾಹಿತಿ ಪಡೆದಿದ್ದಾರೆ. ಈ ಕುರಿತು ನನ್ನ ಅಕೌಂಟೆಂಟ್ ಬಾಲಾಜಿ ಎಲ್ಲಾ ಮಾಹಿತಿ ನೀಡಿದ್ದಾರೆ ಎಂದರು.
ಇದನ್ನೂ ಓದಿ: ಜಮೀರ್ ಅಹಮದ್ ಮನೆ ಮೇಲೆ ನಡೆದಿರುವುದು ಐಟಿ ಅಲ್ಲ, ಇಡಿ ದಾಳಿ
ಇನ್ನು ನನ್ನ ಸಹೋದರರ ಮನೆಗೆ ಸಹ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಬೇಕಾದ ಎಲ್ಲಾ ಮಾಹಿತಿ ನೀಡಿದ ನಂತರ ಅಲ್ಲಿಂದ ತೆರಳಿದ್ದಾರೆ. ಮತ್ತೆ ವಿಚಾರಣೆಗೆ ಬರುವಂತೆ ಯಾವುದೇ ನೋಟಿಸ್ ನೀಡಿಲ್ಲ. ಅವಶ್ಯಕತೆ ಇದ್ದರೆ ಪೋನ್ ಮಾಡುತ್ತೇವೆ, ಅವಾಗ ಬರಬೇಕಾಗುತ್ತದೆ ಎಂದಿದ್ದಾರೆ ಎಂದರು.