ಬೆಂಗಳೂರು : ವಿಧಾನಪರಿಷತ್ಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದಲ್ಲಿನ ವಿಧಾನ ಪರಿಷತ್ ಸಭಾಪತಿ ಅವರ ಕೊಠಡಿಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸದಸ್ಯ ಅನಿಲ್ ಕುಮಾರ್ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು.
ಎಂ.ಎಲ್. ಅನಿಲ್ ಕುಮಾರ್ ಅವರು ಭಗವಂತನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ಕಾಂಗ್ರೆಸ್ನಿಂದ ಆಯ್ಕೆಯಾದ ಅನಿಲ್ ಕುಮಾರ್, ಜನವರಿ 6ರಂದು ನಡೆದ ಪ್ರಮಾಣವಚನ ಸಮಾರಂಭದಲ್ಲಿ ಗೈರಾಗಿದ್ದರು.
ಮಾಜಿ ಸಚಿವ ಕೃಷ್ಣಭೈರೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹಾಗೂ ಅನಿಲ್ ಕುಮಾರ್ ಕುಟುಂಬದ ಸದಸ್ಯರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: ಲಾಕ್ಡೌನ್ ಮಾಡುವ ವಿಚಾರ ನಮ್ಮ ಮುಂದೆ ಇಲ್ಲ: ಸಚಿವ ಆರ್. ಅಶೋಕ್ ಸ್ಪಷ್ಟನೆ