ETV Bharat / city

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಕಾಂಗ್ರೆಸ್​ ಪ್ರಶ್ನೆ - ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ ದಿನೇಶ್​ ಗುಂಡೂರಾವ್

ನಿರ್ಮಲಾ ಸೀತಾರಾಮನ್​ ಅವರನ್ನು ರಾಜ್ಯಸಭೆಗೆ ಇನ್ನೊಮ್ಮೆ ಆಯ್ಕೆ ಮಾಡಲು ಬಯಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್​ ಟೀಕಾಪ್ರಹಾರ ಮಾಡಿದೆ. ನಿರ್ಮಲಾ ಸೀತಾರಾಮನ್​ ಅವರು ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂದು ದಿನೇಶ್​ ಗುಂಡೂರಾವ್ ಪ್ರಶ್ನಿಸಿದ್ದಾರೆ.

congress-opposes-to-nirmala-sitharaman
ಕಾಂಗ್ರೆಸ್​ ಪ್ರಶ್ನೆ
author img

By

Published : May 16, 2022, 10:48 PM IST

ಬೆಂಗಳೂರು: ರಾಜ್ಯಸಭೆ ಚುನಾವಣೆ ಘೋಷಣೆಯಾಗಿದ್ದು, ಆಯಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆಗೆ ಸಿದ್ಧತೆ ನಡೆಸಿವೆ. ಕರ್ನಾಟಕದಿಂದ ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಬಯಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೊಡುಗೆಯನ್ನು ಕಾಂಗ್ರೆಸ್​ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ವಿವರಿಸಬೇಕು ಎಂದು ಒತ್ತಾಯಿಸಿದ್ದಾರೆ.

  • 1
    ಕೇಂದ್ರ ಸಚಿವೆ @nsitharaman ರವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಮಾಡಲು ರಾಜ್ಯ BJP ನಿರ್ಧರಿಸಿದೆ.
    ಅಭ್ಯರ್ಥಿಗಳ ಆಯ್ಕೆ ಆಯಾ ಪಕ್ಷದ ಆಂತರಿಕ ವಿಚಾರ.
    ಆದರೆ ರಾಜ್ಯದಿಂದ ಆಯ್ಕೆಯಾಗಿ ಈಗಾಗಲೇ ಸಚಿವೆಯಾಗಿರೋ ನಿರ್ಮಲಾ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಯೇನು? ನಿರ್ಮಲಾರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳಿಸುವ ಅವಶ್ಯಕತೆ ಏನಿದೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 16, 2022 " class="align-text-top noRightClick twitterSection" data=" ">

ನಿರ್ಮಲಾ ಸೀತಾರಾಮನ್​ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಆಯ್ಕೆ ಮಾಡಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಅಭ್ಯರ್ಥಿಗಳ ಆಯ್ಕೆ ಆಯಾ ಪಕ್ಷದ ಆಂತರಿಕ ವಿಚಾರವಾಗಿದೆ. ಆದರೆ, ರ್ನಿಮಲಾ ಅವರು ಕರ್ನಾಟಕದಿಂದ ಆಯ್ಕೆಯಾಗಿ ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರೆ? ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳಿಸುವ ಅವಶ್ಯಕತೆ ಏನಿದೆ? ನಿರ್ಮಲಾ ಸೀತಾರಾಮನ್ 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5495 ಕೋಟಿ ಅನುದಾನಕ್ಕೂ ಕತ್ತರಿ ಹಾಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • 2
    ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ ₹5495 ಕೋಟಿ ಅನುದಾನಕ್ಕೂ ಕತ್ತರಿ ಹಾಕಿದ್ದಾರೆ.
    ಅತ್ತ ರಾಜ್ಯಕ್ಕೆ ಬರಬೇಕಿರುವ #GST ಬಾಕಿಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಇಂತಹವರನ್ನು ರಾಜ್ಯದಿಂದ ಆಯ್ಕೆ ಮಾಡಿದರೆ ರಾಜ್ಯಕ್ಕೆ ಏನು ಪ್ರಯೋಜನ?

ರಾಜ್ಯಕ್ಕೆ ಬರಬೇಕಿರುವ ಜಿಎಸ್​ಟಿ ಬಾಕಿಯ ಬಗ್ಗೆಯೂ ತುಟಿ ಬಿಚ್ಚುತ್ತಿಲ್ಲ. ಇಂತಹವರನ್ನು ರಾಜ್ಯದಿಂದ ಆಯ್ಕೆ ಮಾಡಿದರೆ ಕರ್ನಾಟಕಕ್ಕೆ ಏನು ಪ್ರಯೋಜನ? ಉಂಡ ಮನೆಗೆ ದ್ರೋಹ ಎಸಗುವ ಕುತ್ಸಿತ ಬುದ್ಧಿಯ ನಿರ್ಮಲಾ ಸೀತಾರಾಮನ್ ಅವರನ್ನು ಮತ್ತೊಮ್ಮೆ ರಾಜ್ಯಸಭೆಗೆ ಕಳಿಸುವ ರಾಜ್ಯ ಬಿಜೆಪಿ ನಾಯಕರ ನಿರ್ಧಾರ ರಾಜ್ಯದ್ರೋಹದ ಕೆಲಸ. ರಾಜ್ಯ ಬಿಜೆಪಿ ನಾಯಕರು ಗತಿಯಿಲ್ಲದೇ, ಮತಿಯಿಲ್ಲದ ನಿರ್ಮಲಾರನ್ನು ರಾಜ್ಯಸಭೆಗೆ ಕಳಿಸಲು ಹೊರಟಿದ್ದಾರೆ‌. ರಾಜ್ಯಕ್ಕೆ ಉಪಕಾರ ಮಾಡುವವರನ್ನು ಆರಿಸಲಿ ಎಂದು ಅವರು ಸಲಹೆ ನೀಡಿದ್ದಾರೆ.

ಓದಿ: 21ನೇ ಶತಮಾನದಲ್ಲಿ ಜ್ಞಾನಕ್ಕೆ ಮಾತ್ರ ಮಹತ್ವವಿದೆ: ಸಿಎಂ ಬೊಮ್ಮಾಯಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.