ETV Bharat / city

ಸಂಡೂರು ‌ತಹಶೀಲ್ದಾರ್ ಅಮಾನತಿಗೆ ಪಟ್ಟು : ಸದನದ ಬಾವಿಗಿಳಿದು ಧರಣಿ ನಡೆಸಿದ ಕಾಂಗ್ರೆಸ್

author img

By

Published : Dec 15, 2021, 2:14 PM IST

ಭ್ರಷ್ಟಾಚಾರದ ಆರೋಪದ ಬಗ್ಗೆ ಕೇಳಲು ಅವರ ಕಚೇರಿಗೆ ಹೋದಾಗ ಅಗೌರವವಾಗಿ ನಡೆಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಂಡೂರು ತಾಲೂಕಿನ ತಹಶೀಲ್ದಾರ್ ರಶ್ಮಿ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತುಕಾರಾಂ ಆಗ್ರಹಿಸಿದರು..

Karnataka Legislative Assembly session
ಕರ್ನಾಟಕ ವಿಧಾನ ಸಭೆ ಅಧಿವೇಶನ

ಬೆಂಗಳೂರು : ಸಂಡೂರು ತಾಲೂಕಿನ ತಹಶೀಲ್ದಾರ್ ರಶ್ಮಿ ಅವರನ್ನು ಅಮಾನತು ಮಾಡಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು.

ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ತುಕಾರಾಂ ಅವರು ಈ ಬಗ್ಗೆ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾಪ ಮಂಡನೆ ಮಾಡಿದರು. ತಹಶೀಲ್ದಾರ್ ಕಾಲೇಜಿನಲ್ಲಿ ಪಾರ್ಟಿ ಮಾಡುತ್ತಾರೆ. ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ಆರೋಪ ಅವರ ಮೇಲಿದೆ. ತಹಶೀಲ್ದಾರರು ಕೋಲು ಹಿಡಿದು ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ನನ್ನ ಹೆಸರು ಹಾಕಿಲ್ಲ. ಆ ಮೂಲಕ ಅವಮಾನ ಮಾಡಿದ್ದಾರೆ ಎಂದು ತುಕಾರಾಂ ಸದನದ ಗಮನಕ್ಕೆ ತಂದರು. ಭ್ರಷ್ಟಾಚಾರದ ಆರೋಪದ ಬಗ್ಗೆ ಕೇಳಲು ಅವರ ಕಚೇರಿಗೆ ಹೋದಾಗ, ಅಗೌರವವಾಗಿ ನಡೆಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತುಕಾರಾಂ ಆಗ್ರಹಿಸಿದರು.

ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಇದು ಬಹಳ ಗಂಭೀರವಾದ ವಿಚಾರ. ತುಕಾರಾಂ ಪತ್ರದ ಮೇಲೆ ಕ್ರಮಕೈಗೊಳ್ಳಲು ಸಚಿವ ಜೆ.ಸಿ ಮಾಧುಸ್ವಾಮಿ ಸೂಚಿಸಿದ್ದಾರೆ. ಇದಾದ ಮೇಲೂ ಶಾಸಕರಿಗೆ ತಹಶೀಲ್ದಾರರು ಅವಮಾನ ಮಾಡುವುದು ನಿಂತಿಲ್ಲ.

ಸಿಎಂ ಆದೇಶ ಇದ್ದರೂ ಇಲಾಖೆ ಅಧಿಕಾರಿಗಳು ತಹಶೀಲ್ದಾರರನ್ನು ವರ್ಗಾವಣೆ ಮಾಡಿಲ್ಲ. ಈ ವಿಚಾರವಾಗಿ ತೇಲಿಸುವ ಉತ್ತರ ಕೊಡಬಾರದು. ಅಧಿಕಾರಿಗಳು ನಿಮ್ಮ ಜಿಲ್ಲೆಯಲ್ಲಿ ಹೀಗೆ ಮಾತನಾಡಿದರೆ ಸುಮ್ಮನಿರುತ್ತಾರಾ? ಎಂದು ಪ್ರಶ್ನಿಸಿದರು.

ಹೋಗ್ರೀ ನಮಗೆ ಆಡಳಿತ ನಡೆಸುವುದು ಗೊತ್ತಿದೆ ಎಂದರೆ ಸುಮ್ಮನಿರಬೇಕಾ?. ಕೂಡಲೇ ತಹಶೀಲ್ದಾರರನ್ನು ಅಮಾನತು ಮಾಡಿ‌ ಶಿಸ್ತು ಕ್ರಮ ಕೈಗೊಳ್ಳಬೇಕು. ಸರ್ಕಾರ ಇದನ್ನು ಪ್ರತಿಷ್ಠೆಯ ವಿಚಾರವಾಗಿ ನೋಡಬಾರದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರ‌‌ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಕೂಡಲೇ ವರ್ಗಾವಣೆ ಮಾಡಲು ಆದೇಶ ಮಾಡುತ್ತೇನೆ ಹಾಗೂ ತನಿಖೆಗೂ ಸೂಚನೆ ಕೊಡುತ್ತೇನೆ ಎಂದರು.

ಆದರೆ, ಇದಕ್ಕೆ ಒಪ್ಪದ ಸಿದ್ದರಾಮಯ್ಯ, ವರ್ಗಾವಣೆ ಮಾಡುವುದು ಶಿಕ್ಷೆ ಅಲ್ಲ. ತಹಶೀಲ್ದಾರ್ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಏನು ತಪ್ಪು ಆಗಿದೆ ಎಂಬುದರ ಬಗ್ಗೆ ತನಿಖೆ ಮಾಡಿ ಕಾನೂನು ಪ್ರಕಾರ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಇದೇ ವೇಳೆ ಹಕ್ಕುಚ್ಯುತಿ ಸಮಿತಿಗೆ ನೀಡಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದಾದಾಗ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ, ಎರಡೆರಡು ತನಿಖೆ ಸಾಧ್ಯವಿಲ್ಲ. ವರ್ಗಾವಣೆ ಹಾಗೂ ತನಿಖೆಗೆ ಸೂಚಿಸುತ್ತೇವೆ ಅಥವಾ ಹಕ್ಕುಚ್ಯುತಿ ಸಮಿತಿಗೆ ಕೊಡಿ ವರದಿ ಬಂದ ಬಳಿಕ ಕ್ರಮಕೈಗೊಳ್ಳುತ್ತೇವೆ. ಹಕ್ಕುಚ್ಯುತಿ ಸಮಿತಿಗೆ ಕೊಟ್ಟರೆ ವರ್ಗಾವಣೆ, ತನಿಖೆಗೆ ಕೊಡಲು ಸಾಧ್ಯವಿಲ್ಲ.‌ ಎರಡು ಕ್ರಮ ಏಕಕಾಲದಲ್ಲಿ ಸಾಧ್ಯವಿಲ್ಲ ಎಂದರು.

ಈ ವೇಳೆ ಮಧ್ಯಪ್ರವೇಶಿದ ಸಿದ್ದರಾಮಯ್ಯ, ಹಲವು ಬಾರಿ ಕಾನೂನು ಸಚಿವರ ಗಮನಕ್ಕೆ ತಂದಿದ್ದಾರೆ. ಇಷ್ಟೆಲ್ಲಾ ಆದರೂ ವರ್ಗಾವಣೆ ಸರಿಯಾದ ಕ್ರಮ ಅಲ್ಲ. ಅಮಾನತು ಮಾಡಿ ಕ್ರಮಕೈಗೊಳ್ಳಲಿ. ಹಿರಿಯ ಶಾಸಕರಿಗೆ ಅವಮಾನ ಆದರೆ ಸಹಿಸಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸದಸ್ಯರು ತಹಶೀಲ್ದಾರರ ಅಮಾನತಿಗೆ ಆಗ್ರಹಿಸಿ, ಸರ್ಕಾರದ ನಡೆಯನ್ನು ವಿರೋಧಿಸಿ ಬಾವಿಗಿಳಿದು ಧರಣಿ ನಡೆಸಿದರು. ಇದರಿಂದ ಸದನವನ್ನು ಸ್ಪೀಕರ್ 10 ನಿಮಿಷಗಳ ಕಾಲ ಮುಂದೂಡಿದರು.

ಇದನ್ನೂ ಓದಿ: ನಮ್ಮನ್ನೆಲ್ಲ ನೆಗ್ಲೆಟ್ ಮಾಡಿರುವುದೇ ಪರಿಷತ್ ಚುನಾವಣೆ ಸೋಲಿಗೆ ಕಾರಣ : ಶಾಸಕ ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.