ETV Bharat / city

'ಬೊಮ್ಮಾಯಿ ಜನತೆಯ ಸಂಕಷ್ಟ ಅರಿಯದ ನಿರ್ಲಕ್ಷ್ಯ ಸಿಎಂ'.. ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ನಾಯಕ ಎಸ್ ಮನೋಹರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು..

congress protest against state bjp govt
ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ
author img

By

Published : Mar 22, 2022, 1:53 PM IST

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ನಾಯಕ ಎಸ್ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಆರ್ ಅಶೋಕ್, ಶ್ರೀರಾಮುಲು, ಡಾ. ಕೆ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಭಾವಚಿತ್ರವುಳ್ಳ ಮುಖವಾಡವನ್ನು ಹಾಕಿಕೊಂಡು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್. ಮನೋಹರ್, ರಾಜ್ಯ ಬಿಜೆಪಿ ಸರ್ಕಾರ ಪ್ರತಿ ನಿತ್ಯ, ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರವನ್ನು ದಾಖಲೆ ಮಟ್ಟದಲ್ಲಿ ಮಾಡಿ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ದಿನನಿತ್ಯವೂ ಪ್ರತಿ ಇಲಾಖೆಯ ಭ್ರಷ್ಟಾಚಾರದ ಕರ್ಮಕಾಂಡ ಬಹಿರಂಗವಾಗುತ್ತಿದೆ. ಮುಖ್ಯಮಂತ್ರಿಯವರು ಯಾವುದೇ ತನಿಖೆಗೆ ಮುಂದಾಗದೇ ಮೌನಕ್ಕೆ ಶರಣಾಗಿದ್ದಾರೆ.

ಪ್ರತಿ ಇಲಾಖೆಯಿಂದಲೂ ಮುಖ್ಯಮಂತ್ರಿ ವಾಮಮಾರ್ಗದಿಂದ ಹಣ ಪಡೆಯುತ್ತಿದ್ದಾರೆ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು. ಬಿಜೆಪಿಯ ಭ್ರಷ್ಟಾಚಾರವನ್ನು ಮರೆಮಾಚಲು, ದಿ ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಿಸುವ ಮೂಲಕ ರಾಜ್ಯದ ಜನತೆಯ ಸಂಕಷ್ಟವನ್ನು ಅರಿಯದ ನಿರ್ಲಕ್ಷ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಂಬುದು ಬಹಿರಂಗವಾಗಿದೆ ಎಂದರು.

ಕೋಮುವಾದ ಸೃಷ್ಟಿ : ಆರೋಗ್ಯ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ, ಸಾರಿಗೆ ಇಲಾಖೆ ಇದ್ದೂ ಸತ್ತಂತೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಗಲು ದರೋಡೆ, ಕಂದಾಯ ಇಲಾಖೆಯಲ್ಲಿ ನಿತ್ಯವೂ ವಸೂಲಿ ಹೀಗೆ ಪ್ರತಿ ಇಲಾಖೆಯಲ್ಲೂ ಸಹ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಈ ಬಿಜೆಪಿ ಸರ್ಕಾರ ಶೇ.40 ಲಂಚ ಪಡೆಯುವ ಸರ್ಕಾರ ಎಂಬುದು ಈಗ ಜನತೆಗೆ ತಿಳಿಯುತ್ತಿದೆ. ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸದೇ ಧಾರ್ಮಿಕ ಹಾಗೂ ಭಾವನಾತ್ಮಕ ವಿಷಯಗಳನ್ನು ಕೆದಕಿ ಕೋಮುವಾದವನ್ನು ಸೃಷ್ಟಿಸುವುದೇ ಬಿಜೆಪಿ ಸರ್ಕಾರದ ಒಂದಂಶದ ಕಾರ್ಯಕ್ರಮವಾಗಿದೆ ಎಂದು ಆರೋಪಿಸಿದರು.

ಸಿಎಂ ತಾರತಮ್ಯ ನೀತಿ : ಬೆಂಗಳೂರು ನಗರದ ಉಸ್ತುವಾರಿ ಆಗಿರುವ ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರಿಗೆ ಅನುದಾನ ನೀಡಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹಣ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಇವರು ಬಿಜೆಪಿ ಶಾಸಕರ ಅಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ತಿಳಿಸಬೇಕು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡದೇ ಹೋದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತೊಲಗಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ಇದನ್ನೂ ಓದಿ: ತಮಿಳುನಾಡಿನ ಗೊಡ್ಡು ಬೆದರಿಕೆಗೆ ಕರ್ನಾಟಕ ಬಗ್ಗಲ್ಲ : ಸಚಿವ ಆರ್.ಅಶೋಕ್

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾರ ಜಿ ಜನಾರ್ಧನ್, ಎ ಆನಂದ್, ಎಲ್ ಜಯಸಿಂಹ ಪ್ರಕಾಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.