ಶಿವಮೊಗ್ಗ: ರಾಹುಲ್ ಗಾಂಧಿ ಮೇಲೆ ಕೇಂದ್ರ ಸರ್ಕಾರ ವೈಯಕ್ತಿಕ ದ್ವೇಷದಿಂದ ಇಡಿ ವಿಚಾರಣೆ ನಡೆಸುತ್ತಿದೆ ಎಂದು ಆರೋಪಿಸಿ ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯ ಮುಖ್ಯ ರಸ್ತೆಯಲ್ಲಿ ಆದಾಯ ತೆರಿಗೆ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಬಿಜೆಪಿ ಸರ್ಕಾರವು ಸೋನಿಯಾ ಗಾಂಧಿ ಅವರ ಕುಟುಂಬವನ್ನು ಟಾರ್ಗೆಟ್ ಮಾಡಿ, ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಇಡಿ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ. ಇಡಿ ಸತತ ಐದು ದಿನಗಳ ಕಾಲ ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸಿದ್ದಾರೆ. ಇದು ಉದ್ದೇಶಪೂರ್ವಕವಾದ ವಿಚಾರಣೆಯಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ಕಾಂಗ್ರೆಸ್ ಮುಖಂಡರು ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದು ಕೊಂಡು ಹೋದರು. ಆದಾಯ ತೆರಿಗೆ ಕಚೇರಿಗೆ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.
(ಇದನ್ನೂ ಓದಿ: ಇಡಿ ವಿಚಾರಣೆ ಎದುರಿಸಲು ನೆರವಾಗಿದ್ದು ಧ್ಯಾನ, ನನ್ನನ್ನು ನೋಡಿ ಅಧಿಕಾರಿಗಳೇ ದಂಗಾಗಿದ್ದರು: ರಾಹುಲ್ ಗಾಂಧಿ)