ETV Bharat / city

ಹಿರಿಯ ನಾಗರಿಕರ ಕೆಲಸವನ್ನ ಆದ್ಯತೆ ಮೇರೆಗೆ ಪರಿಗಣಿಸಿ: ಸರ್ಕಾರ ಸುತ್ತೋಲೆ - ರಾಜ್ಯ ಸರ್ಕಾರ

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅವರ ಕೆಲಸಗಳನ್ನು ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

Consider the work of senior citizens on priority: Government Circular
ಹಿರಿಯ ನಾಗರಿಕರ ಕೆಲಸವನ್ನ ಆದ್ಯತೆ ಮೇರೆಗೆ ಪರಿಗಣಿಸಿ: ಸರ್ಕಾರ ಸುತ್ತೋಲೆ
author img

By

Published : Jun 23, 2021, 4:06 AM IST

ಬೆಂಗಳೂರು: ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅವರಿಗೆ ಗೌರವ ನೀಡಿ, ಅವರ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ.
ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದಾಗ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೇ ಇರುವುದು ಸಾಮಾನ್ಯ ವಿಚಾರವಾಗಿದೆ. ಕಚೇರಿಗಳಲ್ಲಿ ಅವರಿಗೆ ಕೂರಲು ಸರಿಯಾದ ಆಸನ ವ್ಯವಸ್ಥೆಯೂ ಇರುವುದಿಲ್ಲ. ಹಿರಿಯ ನಾಗರಿಕರು ತಮ್ಮ ಕೆಲಸಗಳಿಗಾಗಿ ಹಲವು ಬಾರಿ ಸರ್ಕಾರಿ ಕಚೇರಿಗೆ ಅಲೆದಾಡುವ ದೃಶ್ಯ ಸಾಮಾನ್ಯವಾಗಿದೆ.‌ ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಹಿರಿಯ ನಾಗರಿಕರಿಗೆ ಗೌರವ ನೀಡುವಂತೆ ಸೂಚನೆ ನೀಡಿದೆ.

ಹಿರಿಯ ನಾಗರಿಕರು ಕಚೇರಿಗೆ ಭೇಟಿ ನೀಡಿದಾಗ ಅವರಿಗೆ ಗೌರವ ನೀಡಿ, ಆಸನದ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಹಿರಿಯರು ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ತಮ್ಮ ಕೆಲಸದ ನಿಮಿತ್ತ ಕಚೇರಿಗೆ ಭೇಟಿ ನೀಡುವ ಅವರುಗಳ ಮನವಿ, ಕೋರಿಕೆಗಳನ್ನು ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಅವರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆಯೂ ಸರ್ಕಾರ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.