ETV Bharat / city

ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಇಲಾಖೆಗೆ ಸಹಕರಿಸಿ.. ಜಮೀರ್ ಅಹಮ್ಮದ್ ಟ್ವೀಟ್​ - ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರ

ಸರ್ಕಾರ,ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಟ್ವೀಟ್​ ಮಾಡಿದ್ದಾರೆ.

Cooperate with the government, medical staff and police department
ಸರ್ಕಾರ,ವೈದ್ಯಕೀಯ ಸಿಬ್ಬಂದಿ,ಪೊಲೀಸ್ ಇಲಾಖೆಗೆ ಸಹಕರಿಸಿ..ಶಾಸಕ ಜಮೀರ್ ಅಹಮ್ಮದ್ ಟ್ವೀಟ್​
author img

By

Published : Apr 20, 2020, 9:23 AM IST

ಬೆಂಗಳೂರು: ತಡರಾತ್ರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದಲ್ಲಿ ಪುಂಡರು ನಡೆಸಿದ ಗಲಾಟೆ ಬಗ್ಗೆ ಸ್ಥಳೀಯ ಶಾಸಕ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

Cooperate with the government, medical staff and police department
ಸರ್ಕಾರ,ವೈದ್ಯಕೀಯ ಸಿಬ್ಬಂದಿ,ಪೊಲೀಸ್ ಇಲಾಖೆಗೆ ಸಹಕರಿಸಿ..ಶಾಸಕ ಜಮೀರ್ ಅಹಮ್ಮದ್ ಟ್ವೀಟ್​

ಟ್ವೀಟ್ ಮೂಲಕ ತಮ್ಮ ಪ್ರತಿಕ್ರಿಯೆ ನೀಡಿರುವ ಜಮೀರ್, ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ತಡರಾತ್ರಿ ನಡೆದ ಗಲಾಟೆಯಲ್ಲಿ 150ಕ್ಕೂ ಹೆಚ್ಚು ಮಂದಿ ಪುಂಡರು ಪಾದರಾಯನಪುರದಲ್ಲಿ ವೈದ್ಯರು, ಪೊಲೀಸರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಅದಲ್ಲದೆ ಸಾರ್ವಜನಿಕ ಆಸ್ತಿ ಪಾಸ್ತಿಯನ್ನ ಹಾನಿ ಮಾಡಿದ್ದರು. ಜೊತೆಗೆ ಬ್ಯಾರಿಕೇಡ್​ಗಳನ್ನ ಕಿತ್ತುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈಗಾಗಲೇ 50ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ಬಂಧಿಸಿದ್ದು, ಉಳಿದವರನ್ನು ಇಂದು ಬಂಧಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.