ETV Bharat / city

ಕೊರೊನಾ ಕರ್ಫ್ಯೂ ಜಾರಿ ಹಿನ್ನೆಲೆ: ಜನರಿಲ್ಲದೇ ವಿಧಾನಸೌಧ, ವಿಕಾಸಸೌಧ ಭಣ ಭಣ

ಕರ್ಫ್ಯೂ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲೂ ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿತ್ತು. ಎಂಎಸ್ ಬಿಲ್ಡಿಂಗ್ ನಲ್ಲಿರುವ ಕೆಲವು ಕಚೇರಿಗಳು ಹೊರತು ಪಡಿಸಿ ಉಳಿದ ಎಲ್ಲಾ ಕಚೇರಿಗಳು ಬಂದ್ ಆಗಿದ್ದವು.ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಮಾತ್ರ ಶೇ. 100 ರಷ್ಟು ಕರ್ತವ್ಯ ನಿರ್ವಹಣೆ ಮಾಡಲಾಗುತ್ತಿದೆ.

Corona Curfew
ವಿಧಾನಸೌಧ, ವಿಕಾಸಸೌಧದಲ್ಲಿ ಅಧಿಕಾರಿ, ಸಿಬ್ಬಂದಿ ಅತಿ ವಿರಳ
author img

By

Published : Apr 28, 2021, 9:21 PM IST

ಬೆಂಗಳೂರು: ಇಂದಿನಿಂದ ಕೊರೊನಾ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸೇರಿದಂತೆ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳಿಲ್ಲದೇ ಖಾಲಿ, ಖಾಲಿಯಾಗಿದ್ದವು. ಆಡಳಿತ ಕೇಂದ್ರವಾಗಿರುವ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಯಾವಾಗಲೂ ಮುಖ್ಯಮಂತ್ರಿ ಆದಿಯಾಗಿ ಸಚಿವರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ಮಾಡುವುದರಿಂದ ಸದಾ ಜನಜಂಗುಳಿ ಇದ್ದೇ ಇರುತ್ತದೆ. ಆದರೆ, ಇಂದು ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಶೇ. 50 ರಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಇನ್ನು ವಿಧಾನಸೌಧದ ಸುತ್ತಲೂ ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿತ್ತು. ಎಂಎಸ್ ಬಿಲ್ಡಿಂಗ್ ನಲ್ಲಿರುವ ಕೆಲವು ಕಚೇರಿಗಳು ಹೊರತು ಪಡಿಸಿ ಉಳಿದ ಎಲ್ಲಾ ಕಚೇರಿಗಳು ಬಂದ್ ಆಗಿದ್ದವು. ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಮಾತ್ರ ಶೇ. 100 ರಷ್ಟು ಕರ್ತವ್ಯ ನಿರ್ವಹಣೆ ಮಾಡಲಾಗುತ್ತಿದೆ.

ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ, ಪಶುಸಂಗೋಪನೆ ಮತ್ತು‌ ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಿಬ್ಬಂದಿ ‌ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಉಳಿದ ಇಲಾಖೆಗಳ ಸಿಬ್ಬಂದಿ, ಅಧಿಕಾರಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ವಿಕಲಾಂಗ ಸಿಬ್ಬಂದಿ ಹಾಗೂ ಗರ್ಭಿಣಿಯರಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ಸಿಕ್ಕಿದೆ. ಕೋವಿಡ್ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.