ETV Bharat / city

ಕೊರೊನಾಗೆ ಕಂಗೆಟ್ಟ ಕರುನಾಡು : 15 ದಿನ ಕಾಲೇಜುಗಳಿಗೆ ರಜೆ ಘೋಷಣೆ! - ಬೆಂಗಳೂರು ಸುದ್ದಿ

7,8,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 14 ರಿಂದ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಈಗ ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆ ಎಂದಿನಂತೆ ನಡೆಯಲಿವೆ.

Corona Effect: Declaration of Leave to 15-Day Colleges
ಕೊರೊನಾ ಎಫೆಕ್ಟ್​: 15 ದಿನ ಕಾಲೇಜುಗಳಿಗೆ ರಜೆ ಘೋಷಣೆ
author img

By

Published : Mar 13, 2020, 7:58 PM IST

Updated : Mar 13, 2020, 8:23 PM IST

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್​ ಹರಡುವಿಕೆ ತೀವ್ರತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ‌ಇಲಾಖೆ‌ ಮಾರ್ಚ್ 28ರವರೆಗೂ ಅಂದ್ರೆ 15 ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

Corona Effect: Declaration of Leave to 15-Day Colleges
ಕೊರೊನಾ ಎಫೆಕ್ಟ್​: 15 ದಿನ ಕಾಲೇಜುಗಳಿಗೆ ರಜೆ ಘೋಷಣೆ

ಈಗಾಗಲೇ ಈ ಬಗ್ಗೆ ಕಾಲೇಜು ಶಿಕ್ಷಣ ‌ಇಲಾಖೆ‌ಯಿಂದ ಸುತ್ತೋಲೆ ಹೊರಡಿಸಲಾಗಿದೆ. ಕಾಲೇಜಿನ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುವಂತೆ ಸೂಚಿಸಿಲಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡುವ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ನಗರ-ಗ್ರಾಮಾಂತರ ಜಿಲ್ಲೆಯಲ್ಲಿ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಈಗ ಅದನ್ನೇ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. 7,8,9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 14 ರಿಂದ ಪರೀಕ್ಷಾ ಪೂರ್ವ ಸಿದ್ಧತಾ ರಜೆ ನೀಡಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಲಾಗಿದೆ. ಈಗ ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆ ಎಂದಿನಂತೆ ನಡೆಯಲಿವೆ. 10ನೇ ತರಗತಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆಯೂ ಇರುವುದಿಲ್ಲವಂತೆ.

Last Updated : Mar 13, 2020, 8:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.