ETV Bharat / city

ಸೋಂಕಿತರು ಡೈರಿಗಳಿಗೆ ಹಾಲು ತರುತ್ತಿರುವುದರಿಂದ ಕೊರೊ‌ನಾ ಉಲ್ಬಣ: ಎಚ್​ಡಿಕೆ ಆತಂಕ - ಎಚ್​ಡಿಕೆ ಆತಂಕ

ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರ್ಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ ಎಂದು ಹೆಚ್​ಡಿಕೆ ಎಚ್ಚರಿಕೆ ನೀಡಿದ್ದಾರೆ.

  Corona increase in village side: HD Kumaraswamy

author img

By

Published : May 16, 2021, 7:01 PM IST

ಬೆಂಗಳೂರು: ಕೋವಿಡ್ -19 ಈಗ ಹಳ್ಳಿ ಹಳ್ಳಿಗಳನ್ನು ವೇಗವಾಗಿ ವ್ಯಾಪಿಸುತ್ತಿದೆ. ಸೋಂಕಿತರು ಹಾಲನ್ನು ಡೈರಿಗಳಿಗೆ ತಂದು ಹಾಕುತ್ತಿರುವುದರಿಂದ ರೋಗ ಇನ್ನಷ್ಟು ಹಬ್ಬುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಭಾಗದ ಈ ಹೊಸ ಸಮಸ್ಯೆಯನ್ನು ಸರ್ಕಾರ, ಕೆಎಂಎಫ್ ಮತ್ತು ಹಾಲು ಒಕ್ಕೂಟಗಳು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ದೊಡ್ಡ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಈಗಲೇ ಜಾಗೃತಿ ಮೂಡಿಸದಿದ್ದರೆ ಹಳ್ಳಿಗಳಲ್ಲಿ ಸಾವು-ನೋವಿನ ಪ್ರಮಾಣ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

ಕೋವಿಡ್ ಸೋಂಕಿತರ ಮನೆಯ ರಾಸುಗಳಿಂದ ಕರೆದ ಹಾಲನ್ನು ಸೋಂಕಿತರೇ ನೇರವಾಗಿ ಡೈರಿಗೆ ತಂದು ಹಾಕುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಸೋಂಕಿತರಲ್ಲದ ಮನೆಯ ಆರೋಗ್ಯವಂತ ಸದಸ್ಯರು ಹಾಲನ್ನು ತಂದುಹಾಕುವುದರಿಂದ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಬಹುದು. ಡೈರಿಗೆ ಹಾಲು ಹಾಕಲು ಬಂದವರು ಕಡ್ಡಾಯವಾಗಿ ಶುಚಿತ್ವ, ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಕಡ್ಡಾಯವಾಗಿ ಡೈರಿಗಳಲ್ಲಿ ಶುಚಿತ್ವ ಕಾಪಾಡುವುದರ ಜೊತೆಗೆ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಹಾಲು ಉತ್ಪಾದಕ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಕೋವಿಡ್ ವಾರಿಯರ್ಸ್ ಎಂದು ಘೋಷಿಸಬೇಕು. ಪಶುವೈದ್ಯರು, ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸಬೇಕು‌ ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.