ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 3,571 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,80,283ಕ್ಕೆ ಏರಿಕೆಯಾಗಿದೆ.
ಒಂದೇ ದಿನ 27 ಜನರು ಸಾವನ್ನಪ್ಪಿದ್ದು, ಈವರೆಗೆ 2,521 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 3,773 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1,38,289 ಮಂದಿ ಗುಣಮುಖರಾಗಿದ್ದಾರೆ. ಸದ್ಯ 39,472 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 267 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.