ಬೆಂಗಳೂರು: ನಗರದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು ಇಂದು 1,836 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.
ಕಳೆದ ನಾಲ್ಕು ತಿಂಗಳ ಬಳಿಕ ದಾಖಲಾದ ಅತಿಹೆಚ್ಚು ಪಾಸಿಟಿವ್ ಕೇಸ್ ಇದಾಗಿದೆ. ನಿನ್ನೆಯ ಹೆಲ್ತ್ ಬುಲೆಟಿನ್ ನಲ್ಲಿ 1,490 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು.
ಇದನ್ನೂ ಓದಿ: ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು
ಈಗಾಗಲೇ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲಾಗುತ್ತಿದೆ. ಇನ್ನೊಂದೆಡೆ ವ್ಯಾಕ್ಸಿನೇಷನ್ಗೆ ಹೆಚ್ಚಿನ ಜನ ಮುಂದಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ ಅಭಾವ ಎದುರಾಗುತ್ತಿದೆ.