ಬೆಂಗಳೂರು/ಲಂಡನ್ : ಕರ್ನಾಟಕ ಮೂಲದ ಇಂಗ್ಲೆಂಡ್‍ನ ಲ್ಯಾಂಬೆತ್ ನಗರದ ಮಾಜಿ ಮೇಯರ್ ಡಾ. ನೀರಜ್ ಪಾಟೀಲ್ ಅವರಿಗೂ ಕೊರೊನಾ ಸೋಂಕು ತಗುಲಿದೆ.
ಇಂಗ್ಲೆಂಡ್‍ನ ಥೇಮ್ಸ್ ನದಿ ದಡದಲ್ಲಿ ಜಗಜ್ಯೋತಿ ಬಸವಣ್ಣ ಅವರ ಪ್ರತಿಮೆ ಸ್ಥಾಪಿಸಿದ ಖ್ಯಾತಿ ಹೊಂದಿರುವ ಕನ್ನಡಿಗ ಡಾ. ನೀರಜ್ ಪಾಟೀಲ್, ಸದ್ಯ ಸೆಲ್ಫ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದ ಬಳಿಕ ನೀರಜ್ ಅವರಲ್ಲಿ ಸೋಂಕು ಪತ್ತೆಯಾಗಿದೆ. ಈ ವಿಚಾರವನ್ನು ಖುದ್ದು ನೀರಜ್ ಅವರೇ ತಿಳಿಸಿದ್ದಾರೆ. ಎಲ್ಲರೂ ಜಾಗೃತರಾಗಿರುವಂತೆ ಅವರು ಇದೇ ವೇಳೆ ಮನವಿ ಮಾಡಿದ್ದಾರೆ.