ETV Bharat / city

ಸರ್ವ ಪಕ್ಷಗಳ ಸಭೆ ಬಳಿಕ ಮಹತ್ವದ ಹೆಜ್ಜೆ ಇರಿಸಿದ ಸಿಎಂ ಬಿಎಸ್‌ವೈ.. ಆ ಬಗ್ಗೆ ಕಂಪ್ಲೀಟ್‌ ಡಿಟೇಲ್ಸ್!!

ಕೊರೊನಾ ಮಾಹಾಮಾರಿ ತಡೆಗೆ ರಾಜ್ಯದಲ್ಲಿ ಸಕಲ ರೀತಿಯಿಂದಲೂ ಕ್ರಮಕೈಗೊಳ್ಳಲಾಗ್ತಿದೆ. ಹಾಗೆಯೇ ಲಾಕ್​ಡೌನ್​ನಿಂದಾಗಿ ಜನ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ವಿಧಾನಸೌಧದಲ್ಲಿಂದು ಕೊರೊನಾ ಕುರಿತ ನಡೆಸಿದ ಸರ್ವಪಕ್ಷಗಳ ಸಭೆಯಲ್ಲಿ ಆಡಳಿತ ಪಕ್ಷಕ್ಕೆ ವಿರೋಧ ಪಕ್ಷಗಳ ನಾಯಕರೆಲ್ಲ ಹಲವಾರು ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನೆಲ್ಲ ಅನುಷ್ಠಾನಕ್ಕೆ ತರುವುದಾಗಿ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

corona-preset-meeting-in-vidhanasoudha
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Mar 29, 2020, 4:38 PM IST

ಬೆಂಗಳೂರು: ಸರ್ವ ಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಟ್ವೀಟ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

  • ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ಮುಖ್ಯ ನಿರ್ಣಯಗಳು.@BSYBJP #KarnatakaFightsCorona #StayHome #SocialDistancing pic.twitter.com/RmiGGfthaK

    — CM of Karnataka (@CMofKarnataka) March 29, 2020 " class="align-text-top noRightClick twitterSection" data=" ">
ಸರ್ವಪಕ್ಷ ಸಭೆಯಲ್ಲಿ ಕೈಗೊಂಡ ನಿರ್ಣಯಗಳು :
•ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು.
•ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
• ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇಕ್ರಮಕೈಗೊಳ್ಳಲಾಗುವುದು.
• ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮಕೈಗೊಳ್ಳಲಾಗುವುದು.
• ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.• ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಬಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು.
• ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.
• ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
•ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿರುವೆ. ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್ ಮೂಲಕವೇ ಈ ಎಲ್ಲರದ ಬಗ್ಗೆ ಸಿಎಂ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.