ಬೆಂಗಳೂರು: ಕೊರೊನಾ ಭೀತಿಯಲ್ಲಿರುವ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಠಾಣೆ ಸೀಲ್ ಡೌನ್ ಆಗುವ ಸಾಧ್ಯತೆ ಇದ್ದರೂ ಸಹ ಏನೂ ಇಲ್ಲದಂತೆ ಪೊಲೀಸರು ಬರ್ತಡೇ ಆಚರಿಸಿದ್ದಾರೆ.
ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೊಲೀಸರನ್ನು ಸ್ವ್ಯಾಬ್ ಟೆಸ್ಟ್ಗೆ ಒಳಪಡಿಸಿದಾಗ ಸಿಬ್ಬಂದಿಗೆ ಕೊರೊನಾ ತಗುಲಿರುವುದು ಪತ್ತೆಯಾಗಿದೆ.
ಇಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಸಹ ಠಾಣೆಯ ಇನ್ಸ್ಪೆಕ್ಟರ್ ಬರ್ತಡೇ ಸಂಭ್ರಮಕ್ಕೆ ಅವಕಾಶ ಮಾಡಿಕೊಡುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.