ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಆಧರಿಸಿ ರಾಜ್ಯ ಸರ್ಕಾರ ಕೆಂಪು, ಕಿತ್ತಳೆ ಹಾಗೂ ಹಸಿರು ವಲಯಗಳನ್ನು ಘೋಷಣೆ ಮಾಡಿದೆ. ಇದಕ್ಕೂ ಮೊದಲು ಕೇಂದ್ರ ಸರ್ಕಾರ ಈ ವಲಯಗಳನ್ನು ಘೋಷಣೆ ಮಾಡಿದ್ದು ಈ ವಲಯಗಳನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿದೆ.
ರಾಜ್ಯ ಸರ್ಕಾರ ಘೋಷಿಸಿರುವ ರೆಡ್ಝೋನ್ನಲ್ಲಿ ಬೆಂಗಳೂರು ನಗರ, ಮೈಸೂರು, ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಮಂಡ್ಯ, ಬೀದರ್, ದಕ್ಷಿಣ ಕನ್ನಡ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ತುಮಕೂರು, ದಾವಣಗೆರೆ ಜಿಲ್ಲೆಗಳಿವೆ.

ಆರೆಂಜ್ ಝೋನ್ನಲ್ಲಿ ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿವೆ. ಇನ್ನು ಗ್ರೀನ್ ಝೋನ್ನಲ್ಲಿ ಯಾದಗಿರಿ, ರಾಮನಗರ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಚಾಮರಾಜನಗರ, ಹಾವೇರಿ ಜಿಲ್ಲೆಗಳಿವೆ.