ETV Bharat / city

ಭ್ರಷ್ಟಾಚಾರ ಪ್ರಕರಣ: ಎಸಿಬಿ ವಿಚಾರಣೆ ಬೆನ್ನಲ್ಲೇ ಬೆಂಗಳೂರು ಡಿಸಿ ವರ್ಗಾವಣೆ - ACB Raid on bengaluru dc office

ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಗೆ ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ ಅವರನ್ನು ಹೆಚ್ಚುವರಿಯಾಗಿ ಸರ್ಕಾರ ನೇಮಿಸಿದೆ.

dc manjunath
dc manjunath
author img

By

Published : Jul 1, 2022, 10:02 PM IST

ಬೆಂಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ. ಜಿಲ್ಲಾಧಿಕಾರಿ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದ ಬಳಿಕ ನಿನ್ನೆಯಷ್ಟೇ ಎಸಿಬಿ ತಂಡವು ಡಿಸಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಿರುವ ಜೆ ಮಂಜುನಾಥ್ ಅವರನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆ ಯೋಜನೆಯ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ವರ್ಗಾವಣೆ ಆದೇಶ ಪ್ರತಿ
ಆದೇಶ ಪ್ರತಿ

ಪ್ರಕರಣದ ಹಿನ್ನೆಲೆ: ಕಳೆದ ಮೇ 21ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಶೀಲ್ದಾರ್ ಮಹೇಶ್ ಎಂಬುವರು ಗುತ್ತಿಗೆ ನೌಕರ ಚೇತನ್ ಆಲಿಯಾಸ್ ಚಂದ್ರು ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು. ಹೀಗಾಗಿ ಎಸಿಬಿ‌ ತನಿಖಾಧಿಕಾರಿಗಳು ಡಿಸಿ ವಿಚಾರಣೆ‌ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವಿರಬಹುದೆಂದು ಸಂಶಯ ವ್ಯಕ್ತಪಡಿಸಿದ ಹೈಕೋರ್ಟ್, ಭೂ ವ್ಯಾಜ್ಯ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನೂ ಆರೋಪಿಯನ್ನಾಗಿ ಸೇರಿಸುವಂತೆ ಆದೇಶಿಸಿತ್ತು. ಜಿಲ್ಲಾಧಿಕಾರಿಗಳ ಪಾತ್ರದ ಬಗ್ಗೆ ಸರಿಯಾಗಿ ತನಿಖೆ ನಡೆಸದ ಎಸಿಬಿಯನ್ನು ಹೇಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಬೇಗೂರಿನ ನಿವಾಸಿಯೊಬ್ಬರು ಅನೇಕಲ್​ನ‌ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಡಿಸಿ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿತ್ತು. ಅರ್ಜಿದಾರರ ಅರ್ಜಿ ಕ್ಲಿಯರ್ ಮಾಡಬೇಕಾದರೆ ಆರೋಪಿ ಮಹೇಶ್ ಆರಂಭದಲ್ಲಿ 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ನಂತರ 5 ಲಕ್ಷ ರೂ.ಗೆ ಒಪ್ಪಿಕೊಂಡಿದ್ದರು. ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಹೈಕೋರ್ಟ್ ಚಾಟಿ ಬೆನ್ನಲೇ ಎಚ್ಚೆತ್ತ ಎಸಿಬಿ: ಬೆಂಗಳೂರು ಡಿಸಿಗೆ ನೋಟಿಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.