ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಮತ್ತು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸಿ.ಮಂಜುಳಾ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು. ಆದರೆ ಇನ್ನೂ ಕೂಡಾ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನೇರವಾಗಿ ಅಭ್ಯರ್ಥಿಗಳಿಗೆ ಕರೆ ಮಾಡಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿದೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆಗೆ ಸಂಭಾವ್ಯ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಬಿಎಸ್ವೈ ಪುತ್ರ ವಿಜಯೇಂದ್ರ ಮೇಲ್ಮನೆ ಪ್ರವೇಶಕ್ಕೆ ಬಿಜೆಪಿ ಹೈಕಮಾಂಡ್ನಿಂದ ಅಡ್ಡಿ?
ಈಗಾಗಲೇ ಲಿಂಗರಾಜ್ ಪಾಟೀಲ್, ಕೇಶವಪ್ರಸಾದ್ ಮತ್ತು ಮಂಜುಳಾ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಛಲವಾದಿ ನಾರಾಯಣಸ್ವಾಮಿ ಆಗಮನವಾಗಲಿದೆ. ಕೊನೆಯ ಕ್ಷಣದಲ್ಲಿ ಅಧಿಕೃತ ಅಭ್ಯರ್ಥಿಗಳ ಹೆಸರು ಬದಲಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಮಂಗಳೂರಿನಿಂದ ಹೊರಟಿರುವ ಕಟೀಲ್ ಕೆಲವೇ ಹೊತ್ತಿನಲ್ಲಿ ಬಿಜೆಪಿ ರಾಜ್ಯ ಕಚೇರಿಗೆ ಸೇರುವರು. ಬಿಜೆಪಿ ರಾಜ್ಯಾಧ್ಯಕ್ಷರ ಆಗಮನದ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಧಿಕೃತ ಬಿಡುಗಡೆ ಸಾಧ್ಯತೆ ಇದೆ. ಜೂನ್ 3ರಂದು ವಿಧಾನ ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಶಾಸಕರ ಸಂಖ್ಯಾಬಲ ಆಧರಿಸಿ ಇಬ್ಬರು ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದೆ.
ಇದನ್ನೂ ಓದಿ: ಪರಿಷತ್ ಚುನಾವಣೆ: ಕಾಂಗ್ರೆಸ್ನಿಂದ ಅಚ್ಚರಿಯ ಆಯ್ಕೆ..!