ETV Bharat / city

Council Election : ಎಸ್‌ ಎಂ ಕೃಷ್ಣ ಭೇಟಿಯಾಗಿ ಸಹಕಾರ ಕೋರಿದ ಮಂಡ್ಯ ಬಿಜೆಪಿ ಅಭ್ಯರ್ಥಿ ಕೆ ಆರ್ ಪೇಟೆ ಮಂಜು - ಎಸ್​ ಎಂ ಕೃಷ್ಣ ಕೆ ಆರ್​ ಪೇಟೆ ಮಂಜು ಮಾತುಕತೆ

Council Election Preparation : ಪರಿಷತ್​ ಚುನಾವಣೆಗೆ ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಆರ್ ಪೇಟೆ ಮಂಜು ಬಿಜೆಪಿ ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಸಹಕರಿಸುವಂತೆ ಮನವಿ ಮಾಡಿದರು..

council election
ಬಿಜೆಪಿ ಅಭ್ಯರ್ಥಿ ಕೆ.ಆರ್. ಪೇಟೆ ಮಂಜು
author img

By

Published : Nov 24, 2021, 5:06 PM IST

ಬೆಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ನಡೆಯುವ ಚುನಾವಣೆಯಲ್ಲಿ ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಆರ್ ಪೇಟೆ ಮಂಜು ಇಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸದಾಶಿವನಗರದಲ್ಲಿರುವ ಎಸ್.ಎಂ ಕೃಷ್ಣ ಅವರ ಶಾಂಭವಿ ನಿವಾಸಕ್ಕೆ ಆಗಮಿಸಿದ ಕೆ.ಆರ್.ಪೇಟೆ ಮಂಜು, ಮಾಜಿ ಸಿಎಂ ಕಾಲಿಗೆ ಎರಗಿ ಆಶೀರ್ವಾದ ಪಡೆದುಕೊಂಡರು. ಬಳಿಕ ಪರಿಷತ್​ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

ಮಂಡ್ಯದಲ್ಲಿ ಸಾಕಷ್ಟು ರಾಜಕೀಯ ಪ್ರಭಾವ ಹೊಂದಿರುವ ಕೃಷ್ಣ ಅವರು ಚುನಾವಣೆಯಲ್ಲಿ ಸಹಕಾರ ನೀಡುವ ಆಶ್ವಾಸನೆ ನೀಡಿ ಆಶೀರ್ವದಿಸಿದರು ಎನ್ನಲಾಗಿದೆ.

ಈ ವೇಳೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಜೊತೆಗಿದ್ದರು. ಮಂಡ್ಯ ಬಿಜೆಪಿ ಅಭ್ಯರ್ಥಿ ಮಂಜು ಪರ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.