ETV Bharat / city

ಪರಿಷತ್ ಚುನಾವಣೆ: ರಾತ್ರಿ ಅಥವಾ ನಾಳೆ ಅಭ್ಯರ್ಥಿ ಘೋಷಣೆ, ಹೊರಟ್ಟಿ ವಿರುದ್ಧ ಅಭ್ಯರ್ಥಿ ಕಣಕ್ಕೆ - ಹೆಚ್​ಡಿಕೆ

ಆಕಾಂಕ್ಷಿಗಳು ತುಂಬಾ ಜನ ಇದ್ದಾರೆ. ಆದರೆ ಎಲ್ಲರ ಒಮ್ಮತ ಪಡೆದೇ ಅಭ್ಯರ್ಥಿ ಹೆಸರನ್ನು ಘೋಷಿಸಲಾಗುವುದು. ಹೊರಟ್ಟಿ ಅವರ ವಿರುದ್ಧ ಜೆಡಿಎಸ್​ನಿಂದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಶಿಕ್ಷಕರಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಕೊಡುಗೆ ನೀಡಿದ್ದೇನೆ. ನಾನೇ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

council election jds announce Candidates name today knight or tomorrow
ಕುಮಾರಸ್ವಾಮಿ
author img

By

Published : May 23, 2022, 7:17 PM IST

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನವಾಗಿದ್ದು, ಎರಡು, ಮೂರು ಅಭ್ಯರ್ಥಿಗಳು ಇದ್ದಾರೆ. ಇಂದು ರಾತ್ರಿ ಅಥವಾ ನಾಳೆ ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಅಭ್ಯರ್ಥಿ ಘೋಷಣೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ. ಇಬ್ರಾಹಿಂ ಕೂಡ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿರುವ ಅವರು ಪಕ್ಷ ಸಂಘಟನೆಗಾಗಿ ಪಕ್ಷದ ತೀರ್ಮಾನಕ್ಕೆ ಎಲ್ಲ ರೀತಿ ಸಹಮತ ಇರುತ್ತದೆ ಎಂದು ಹೇಳಿದ್ದರು. ರಾತ್ರಿ ಅಥವಾ ನಾಳೆ ಬೆಳಗ್ಗೆ ತೀರ್ಮಾನ ಮಾಡಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದರು.

ನಮ್ಮಲ್ಲಿ ಸಮಸ್ಯೆ ಏನೂ ಇಲ್ಲ. ರಾಜ್ಯಸಭೆ ಚುನಾವಣೆಗೆ ಇನ್ನು ಸಮಯ ಇದೆ. ಅಲ್ಲೂ ಮೂರ್ನಾಲ್ಕು ಜನ ಆಕಾಂಕ್ಷಿಗಳು ಇದ್ದಾರೆ. ಯಾರಲ್ಲೂ ಅಸಮಾಧಾನ‌ ಇಲ್ಲ. ಎಲ್ಲರ ಸಹಮತದೊಂದಿಗೆ ನಾನು, ಇಬ್ರಾಹಿಂ ಹಾಗೂ ವರಿಷ್ಠ ದೇವೇಗೌಡರು ಚರ್ಚೆ ಮಾಡುತ್ತೇವೆ. ದೇವೇಗೌಡರ ತೀರ್ಮಾನ ಅಂತಿಮ. ಟಿ.ಎ. ಶರವಣ, ವೀರೇಂದ್ರ ಅವರ ಹೆಸರು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿದೆ ಎಂದರು.

ಇಂದು ರಾತ್ರಿ ಅಥವಾ ನಾಳೆ ಅಭ್ಯರ್ಥಿ ಘೋಷಣೆ

ರಾತ್ರಿಯೊಳಗೆ ತೀರ್ಮಾನ ಮಾಡಲಾಗುತ್ತದೆ. ಎಂಟತ್ತು ಜನರ ಒತ್ತಡ ಇತ್ತು. ಅಂದಾನಪ್ಪ ಕೂಡ ಹಳೆಯ ಲೀಡರ್ ಇದ್ದರು. ಕೋಲಾರದಲ್ಲಿ ರಾಜೇಶ್ವರಿ ಆಕಾಂಕ್ಷಿಗಳಾಗಿದ್ದಾರೆ. ನಾರಾಯಣಸ್ವಾಮಿ ಅವರು ಕೂಡ ಹಳೆಯವರು. ಆದರೆ, ಅಂತಿಮವಾಗಿ ಅಭ್ಯರ್ಥಿ ಯಾರು ಎಂಬುದನ್ನು ರಾತ್ರಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಹೊರಟ್ಟಿ ವಿರುದ್ಧ ಜೆಡಿಎಸ್‍ ಅಭ್ಯರ್ಥಿ ಕಣಕ್ಕೆ : ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅಭ್ಯರ್ಥಿಯಾಗಿ ಮಾಡಲಾಗಿದೆ. ಇನ್ನು ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ. ಲೋಣಿ ಅಭ್ಯರ್ಥಿಯಾಗಿದ್ದಾರೆ. ನಾನು ಸಿಎಂ ಆಗಿದ್ದಾಗ ಶಿಕ್ಷಕರ ಕ್ಷೇತ್ರಕ್ಕೆ ಅಪಾರ ಕೊಡುಗೆ ಕೊಟ್ಟಿದ್ದೇನೆ. ಜೂನ್‌ 3 ರ ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಾನೇ ಎರಡು ದಿನಗಳ ಪ್ರವಾಸ ಮಾಡುತ್ತೇನೆ. ಅಲ್ಲಿ ಶಿಕ್ಷಕರ ಬಳಿ ಮತಯಾಚನೆ ಮಾಡುತ್ತೇನೆ ಎಂದು ಹೇಳಿದರು.

ನಮ್ಮ ಪಕ್ಷದಿಂದ ಬಿಟ್ಟು ಹೊರಟ್ಟಿ ಅವರು ಬಿಜೆಪಿಗೆ ಹೋಗಿ ಅಲ್ಲಿ ಚುನಾವಣೆಗೆ ನಿಂತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಅವರಿಗೆ ಯಾವ ರೀತಿ ನ್ಯಾಯ ಸಿಕ್ಕಿದೆ ಎಂಬುದು ಗೊತ್ತಿಲ್ಲ, ನಾವು ಹಿಂದೆ ಸರಿಯುವುದಿಲ್ಲ ಎಂದರು. ಇತ್ತೀಚೆಗೆ ನಡೆದ ಒಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ನನ್ನ ಮೇಲಿನ ಒತ್ತಡ ಕಡಿಮೆ ಮಾಡಬೇಕೆಂದು ಎಲ್ಲರೂ ತೀರ್ಮಾನ ಮಾಡಿದ್ದಾರೆ. ಜೂನ್ ತಿಂಗಳ ಬಳಿಕ ಜವಾಬ್ದಾರಿ ನೀಡಲಾಗುತ್ತದೆ ಎಂದು ಹೇಳಿದರು.

ಸೆಸ್ ಕಡಿಮೆ ಮಾಡುವುದು ಉತ್ತಮ: ಪೆಟ್ರೋಲ್, ಡೀಸೆಲ್‌ ಬೆಲೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಅಬಕಾರಿ ಸುಂಕ ಕಡಿಮೆ ಮಾಡಿರುವ ಬಗ್ಗೆ ಗೊಂದಲ ಇತ್ತು. ಈ ಮೂಲಕ ಕೇಂದ್ರ ಸರ್ಕಾರದ 15 ನೇ ಹಣಕಾಸಿನ‌ ನೀತಿ ಏನಿತ್ತು. ಅನುದಾನ ಏನಿದೆ ಅದರಲ್ಲಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಿದ್ದಾರೆ ಎನ್ನಲಾಗಿತ್ತು.‌

ಆದರೆ ಇಂದು ಅದರ ಹೆಚ್ಚಿನ‌ ಒತ್ತಡವನ್ನು ನಾವೇ ಹೊರಿಸಿಕೊಳ್ತೀವಿ ಅಂತ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್ ಪ್ರವಾಸದಲ್ಲಿ ಇದ್ದು ಬಂದ ಮೇಲೆ ನಿರ್ಧಾರ ಮಾಡುತ್ತೇನೆ ಅಂದಿದ್ದಾರೆ. ಆದರೆ, ಈ ಸೆಸ್ ಕಡಿಮೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅಬ್ಬಾಬ್ಬಾ..! ಶಿವಮೊಗ್ಗದಲ್ಲಿ ಬರೋಬ್ಬರಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.