ETV Bharat / city

Council election: ಕೊನೆಗೂ ಜೆಡಿಎಸ್​​ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಏಳು ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕೆ

author img

By

Published : Nov 23, 2021, 9:20 AM IST

ವಿಧಾನ ಪರಿಷತ್​ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಸೂರತ್ ರೇವಣ್ಣ ಈ ಮೊದಲೇ ನಾಮಪತ್ರ ಸಲ್ಲಿಸಿದ್ದಾರೆ. ಉಳಿದ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

council-election-jds-announced-7-candidates
Council election: ಕೊನೆಗೂ ಜೆಡಿಎಸ್​​ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಏಳು ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕೆ

ಬೆಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇಂದು ನಾಮಪತ್ರ ಸಲ್ಲಿಸಲು ಕಡೆ ದಿನವಾಗಿರುವುದರಿಂದ ಬೆಳಗ್ಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

  • ಸೂರಜ್ ರೇವಣ್ಣ - ಹಾಸನ
  • ಅಪ್ಪಾಜಿಗೌಡ - ಮಂಡ್ಯ
  • ಅನಿಲ್ ಕುಮಾರ್ - ತುಮಕೂರು
  • ಹೆಚ್.ಎಂ. ರಮೇಶ್ ಗೌಡ- ಬೆಂಗಳೂರು ಗ್ರಾಮಾಂತರ
  • ವಕ್ಕಲೇರಿ ರಾಮು- ಕೋಲಾರ
  • ಸಿ.ಎನ್. ಮಂಜೇಗೌಡ- ಮೈಸೂರು
  • ಹೆಚ್.ಯು.ಇಸಾಕ್ ಖಾನ್- ಕೊಡಗು

ನಾಮಪತ್ರ ಸಲ್ಲಿಕೆ : ಈಗಾಗಲೇ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಉಳಿದಂತೆ ಎಲ್ಲ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಪರಿಷತ್ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದಲೂ ಗೆಲ್ಲುವ ಕ್ಷೇತ್ರಗಳಿಗೆ ಮಾತ್ರ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಅದರಂತೆ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕದೇ ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ.

Council election: Jds announced 7 candidates
ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ

ವಿಧಾನ ಪರಿಷತ್‌ ಸದಸ್ಯ ರಮೇಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತಿದ್ದು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಕೊನೆಗೂ ಕಾಂಗ್ರೆಸ್​ನಿಂದ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.