ETV Bharat / city

ಕೋವಿಡ್ ಹೆಚ್ಚಳ: ನಿರ್ದೇಶನಗಳನ್ನು ಪಾಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ - instructs the government

ಕೋವಿಡ್ ನಿಯಂತ್ರಣ, ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ ಹಿಂದಿನ ವಿಚಾರಣೆಗಳ ವೇಳೆ ನೀಡಿರುವ ನಿರ್ದೇಶಗಳನ್ನು ಸರ್ಕಾರ ಪಾಲಿಸಬೇಕು ಎಂದು ಸೂಚಿಸಿತು.

ಹೈಕೋರ್ಟ್
ಹೈಕೋರ್ಟ್
author img

By

Published : Apr 7, 2021, 8:39 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ನ್ಯಾಯಾಲಯ ಈ ಹಿಂದೆ ನೀಡಿರುವ ನಿರ್ದೇಶನಗಳನ್ನು ಪಾಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ನಿಯಂತ್ರಣ, ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಹಿಂದಿನ ವಿಚಾರಣೆಗಳ ವೇಳೆ ನೀಡಿರುವ ನಿರ್ದೇಶಗಳನ್ನು ಸರ್ಕಾರ ಪಾಲಿಸಬೇಕು ಎಂದು ಸೂಚಿಸಿತು.

ಸಾರ್ವಜನಿಕರು ಒಟ್ಟಿಗೆ ಸೇರುವಂತಹ ಹೋಟೆಲ್, ರೆಸ್ಟೋರೆಂಟ್, ದೇವಸ್ಥಾನ, ಮಾರ್ಕೆಟ್ ಮತ್ತಿತರೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್​ಗಳನ್ನು ಒದಗಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ಇನ್ನು ಥಿಯೇಟರ್, ಜಿಮ್, ಕ್ಲಬ್​ಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಬಗ್ಗೆ ಅರ್ಜಿದಾರರು ಆಕ್ಷೇಪಿಸಿದ್ದು, ಮುಂದಿನ ವಿಚಾರಣೆ ವೇಳೆ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿರುವ ಆದೇಶವನ್ನು ಹಾಜರುಪಡಿಸುವಂತೆ ಸೂಚಿಸಿತು.

ಖಾಸಗಿ ಕಾರ್ಯಕ್ರಮಗಳನ್ನು ನಡೆಸುವ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಸರಿಯೆನ್ನಿಸುತ್ತಿಲ್ಲ. ಹಾಲ್​ಗಳಲ್ಲಿ 200ಕ್ಕೂ ಹೆಚ್ಚು ಜನ ಸೇರಬಾರದು, ಹೊರಾಂಗಣ ಅಥವಾ ತೆರೆದ ಪ್ರದೇಶದಲ್ಲಿ 500ಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಹೊರಡಿಸಿರುವ ಆದೇಶದಲ್ಲಿ ಜಾಗ ಎಷ್ಟಿರಬೇಕೆಂಬ ಕುರಿತು ನಿಖರತೆ ಇಲ್ಲ. ಹೀಗಾಗಿ ಈ ಆದೇಶವನ್ನು ಸರ್ಕಾರ ಪರಿಷ್ಕರಿಸಬೇಕು. ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್​ಗಳ ಮಾಹಿತಿಯನ್ನು ಈ ಹಿಂದೆ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಸಾರ್ವಜನಿಕವಾಗಿ ಲಭ್ಯವಾಗುವಂತೆ ಕ್ರಮ ಜರುಗಿಸಬೇಕು ಎಂದು ಸೂಚಿಸಿತು.

ವಕೀಲರಿಗೂ ಕೋವಿಡ್ ಸೋಂಕು ಹಬ್ಬುತ್ತಿರುವುದರಿಂದ ಕೇಸುಗಳನ್ನು ಮುಂದೂಡಲಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಪೀಠ, ವಕೀಲರಿಗೆ ಸಮೂಹ ವಿಮೆ ಒದಗಿಸುವ ಸಂಬಂಧ ವಿಮಾ ಕಂಪನಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿತು.

ಇದನ್ನೂ ಓದಿ.. ರಾಜ್ಯದಲ್ಲಿಂದು ಕೊರೊನಾ ಆರ್ಭಟ.. ಬರೋಬ್ಬರಿ 6,976 ಮಂದಿಗೆ ಸೋಂಕು ದೃಢ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.