ಬೆಂಗಳೂರು: ಕೋವಿಡ್ ಉಲ್ಬಣಿಸುತ್ತಿರುವ ಹಿನ್ನೆಲೆ ಸರ್ಕಾರಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ರಾಜ್ಯದ ಹಲವಾರು ಕಡೆ ಕೊರೊನಾ ಮತ್ತು ವೈರಾಣು ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿಯನ್ನು ನಮೂದಿಸುವುದಕ್ಕೆ ಮುಂದಿನ ಆದೇಶದವರೆಗೂ ವಿನಾಯಿತಿ ನೀಡಲಾಗಿದೆ. ಜೊತೆಗೆ ಹಾಜರಾತಿ ಪುಸ್ತಕದಲ್ಲಿ ಹಾಜರಾತಿಯನ್ನು ನಿರ್ವಹಿಸುವಂತೆ ಮತ್ತು ಆಯಾ ಇಲಾಖೆಯ ನೋಡಲ್ ಅಧಿಕಾರಿಗಳು ಈ ಕುರಿತು ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆ ಸರ್ಕಾರ ಈಗಾಗಲೇ ನೈಟ್, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಕ್ರಮಕಗಳನ್ನು ಜಾರಿಗೊಳಿಸಿದೆ.
(ಇದನ್ನೂ ಓದಿ: ವಿವೋ ಐಪಿಎಲ್ ಅಲ್ಲ, ಮುಂದಿನ ವರ್ಷ ಟಾಟಾ ಐಪಿಎಲ್)