ಬೆಂಗಳೂರು: ಕೊರೊನಾ ಪರೀಕ್ಷೆ ಹೆಚ್ಚೆಚ್ಚು ಆದಷ್ಟು ಸೋಂಕಿತರ ಸಂಖ್ಯೆ ನಿಯಂತ್ರಣ ಮಾಡಲು ಸಾಧ್ಯ. ಹೀಗಾಗಿ, ಕೋವಿಡ್ ಪರೀಕ್ಷೆ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಿನ್ನೆ ಒಂದೇ ದಿನ ಲಕ್ಷ ಕೋವಿಡ್ ಪರೀಕ್ಷೆಗಳನ್ನ ನಡೆಸಲಾಗಿದ್ದು, ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ. ರಾಜ್ಯಾದ್ಯಂತ ಇರುವ 146 ಲ್ಯಾಬ್ಗಳ ಮೂಲಕ 55,690 ಆರ್ಟಿಪಿಸಿಆರ್ ಹಾಗೂ 48,658 ರ್ಯಾಪಿಡ್ ಟೆಸ್ಟ್ ನಡೆಸಲಾಗಿದೆ.
ಶೀಘ್ರವೇ ಈ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.