ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆಯ ಬಳಿಕ ಮೊದಲ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿದೆ.
ಮೇ 9 ರಂದು ಬೆಳಗ್ಗೆ 11 ಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಚಿವ ಸಂಪುಟ ನಡೆಯಲಿದೆ. ಸಭೆಯಲ್ಲಿ ಹಲವು ಯೋಜನೆಗಳ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಲೋಕಸಭಾ ಚುನಾವಣೆಯ ನೀತಿ ಸಂಹಿತೆಯಿಂದಾಗಿ, ಹಲವು ಅಗತ್ಯ ಹಾಗೂ ಅನಿವಾರ್ಯ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ರಾಜ್ಯದಲ್ಲಿ ಮತದಾನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ, ನೀತಿ ಸಂಹಿತೆಯನ್ನು ಸಡಿಲಗೊಳಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಸಾಧ್ಯತೆ ಇದೆ.