ETV Bharat / city

ಪ್ರಧಾನಿ ಭೇಟಿ ಪ್ರಯುಕ್ತ ಶಿಕ್ಷಣ ಸಂಸ್ಥೆಗಳಿಗೆ ರಜೆ ಖಂಡನೀಯ: ಡಿ.ಕೆ.ಶಿವಕುಮಾರ್

ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಬಾಗುವ ನಾಗರಿಕರು. ಅವರ ವ್ಯಾಸಂಗಕ್ಕೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ಖಂಡಿಸುವುದಾಗಿ ಡಿ.ಕೆ.ಶಿವಕುಮಾರ್​ ಹೇಳಿದರು.

author img

By

Published : Jun 20, 2022, 3:26 PM IST

D K Shivakumar
ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ನಮ್ಮ ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಅವರು ವಿದ್ಯಾವಂತ ಹಾಗೂ ಕಾನೂನಿಗೆ ತಲೆಬಾಗುವ ನಾಗರಿಕರು. ಅವರ ವ್ಯಾಸಂಗಕ್ಕೆ ರಜೆ ನೀಡಿರುವ ಸರ್ಕಾರದ ನಿರ್ಧಾರವನ್ನು ನಾನು ಖಂಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಕರ್ನಾಟಕ ಶಾಂತಿಪ್ರಿಯ ರಾಜ್ಯವಾಗಿದ್ದು, ಜನರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ ನಡೆಸುವುದಾದರೆ ಅದನ್ನು ಕ್ರಮಬದ್ಧ, ಕಾನೂನುಬದ್ಧ ರೀತಿಯಲ್ಲಿಯೇ ಮಾಡುತ್ತಾರೆ. ಆದರೆ ಸರ್ಕಾರ ಯಾಕೆ ಇಷ್ಟು ಚಿಂತಿತವಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ, ಪ್ರತಿಭಟನೆ ಮಾಡುವ ಹಕ್ಕು ನಮಗಿದೆ. ಕೇಂದ್ರ ಸರ್ಕಾರ ಕಾನೂನನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದು, ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಯಾವುದೇ ತಪ್ಪು ಮಾಡಿಲ್ಲ. ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್​ನಲ್ಲಿ ಈ ಸಂಸ್ಥೆಯ ಮಾಲೀಕತ್ವವನ್ನು ಘೋಷಿಸಿಕೊಂಡಿಲ್ಲ. ಈ ಸಂಸ್ಥೆ ಲಾಭಯೇತರ ಸಂಸ್ಥೆಯಾಗಿದ್ದು, ಸ್ವಾತಂತ್ರ್ಯದ ಸಮಯದಲ್ಲಿ ಹಾಗೂ ನಂತರ ಕಾಂಗ್ರೆಸ್ ಧ್ವನಿಯಾಗಲು ನೆಹರೂ ಈ ಪತ್ರಿಕೆಯನ್ನು ಆರಂಭಿಸಿದ್ದು, ನಾವು ಅದನ್ನು ಉಳಿಸಿಕೊಂಡು ಹೋಗುತ್ತಿದ್ದೇವೆ ಎಂದು ಉತ್ತರಿಸಿದರು.

ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಿರುವ ಮಂಡ್ಯದ ಮಧು ಮಾದೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು. ಮಾಜಿ ಸಚಿವರಾದ ಎಂ.ಎಸ್.ಆತ್ಮಾನಂದ, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಎಂಎಲ್​ಸಿಗಳಾದ ತಿಮ್ಮಯ್ಯ, ದಿನೇಶ್ ಗೂಳಿಗೌಡ, ಮುಖಂಡರಾದ ಗುರುಚರಣ್, ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ರಾಜಧಾನಿಗೆ ಆಗಮಿಸಿದ ಪ್ರಧಾನಿ ಮೋದಿ: 33 ಸಾವಿರ ಕೋಟಿ ರೂ.ಯೋಜನೆಗಳಿಗೆ ಚಾಲನೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.