ETV Bharat / city

ಸಿಎಂ, ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು: ಡಿಕೆಶಿ - ಸಿಎಂ, ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು: ಡಿಕೆಶಿ

ಬಿಜೆಪಿ ಪಕ್ಷದಲ್ಲೇ ಆಂತರಿಕ ಕಚ್ಚಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ಕಾಂಗ್ರೆಸ್​ ಪಕ್ಷವನ್ನು ದೂರಲಿ ಎಂದು ಡಿ.ಕೆ ಶಿವಕುಮಾರ್​ ಟಾಂಗ್​ ಕೊಟ್ಟಿದ್ದಾರೆ.

D. K. Shivakumar
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
author img

By

Published : May 9, 2022, 8:13 PM IST

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು. ಆಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನ ನೀಡಿದೆ. ಈಗಾಗಲೇ ಪೊಲೀಸ್ ಸಿಬ್ಬಂದಿ ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿ ಅವರ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಟಾಂಗ್​ ಕೊಟ್ಟರು.

ಸಿಎಂ, ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು: ಡಿಕೆಶಿ

ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರ ಮಾತಿನ ಬಗ್ಗೆ ಪ್ರತಿಕ್ರಿಯಿಸಿ, ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್​ ಚುನಾವಣೆ ಎದುರಿಸಲಿದೆ : ಸಲೀಂ ಅಹ್ಮದ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.