ETV Bharat / city

ಮುಂದುವರೆದ ಹಿರಿಯ ಕೈ ನಾಯಕರ ಭೇಟಿ: ಹೆಚ್​. ಕೆ. ಪಾಟೀಲ್​ ಜೊತೆ ಡಿಕೆಶಿ ಸಮಾಲೋಚನೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಳಗ್ಗೆ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಕೆ. ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಸಮಾಲೋಚನೆ ನಡೆಸಿದ್ರು.

D K Shivkumar visit to H K Patil house
ಎಚ್.ಕೆ. ಪಾಟೀಲ್ ಅವರ ನಿವಾಸಕ್ಕೆ ಭೇಟಿ ಕೊಟ್ಟ ಡಿ.ಕೆ. ಶಿವಕುಮಾರ್
author img

By

Published : Mar 20, 2020, 12:04 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಳಿಗ್ಗೆ ಮಾಜಿ ಸಚಿವರು, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ. ಪಾಟೀಲ್ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು.

ಎಚ್.ಕೆ. ಪಾಟೀಲ್ ಅವರ ನಿವಾಸಕ್ಕೆ ಭೇಟಿ ಕೊಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರಿನ ಆರ್​ಎಂವಿ 2ನೇ ಹಂತದಲ್ಲಿರುವ ಪಾಟೀಲ್​ರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ, ಅಲ್ಲೇ ಉಪಹಾರ ಸೇವಿಸಿದರು. ಹಿರಿಯ ಮುಖಂಡರಾದ ಡಿ.ಆರ್. ಪಾಟೀಲ್, ಹಸನಬ್ಬ, ನಂಜಯ್ಯನಮಠ ಜತೆಗಿದ್ದರು. ಎಲ್ಲರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚಿಸಿದ ಶಿವಕುಮಾರ್, ಇಡ್ಲಿ ವಡೆ ಜತೆ ಚಹಾ ಸೇವಿಸಿದರು.

D K Shivkumar visit to H K Patil house
ಎಚ್.ಕೆ. ಪಾಟೀಲ್ ನಿವಾಸದಲ್ಲಿ ಉಪಹಾರ ಸೇವಿಸಿದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷರಾಗಿ ಭೂಷಿತರಾದ ನಂತರ ಪ್ರತಿದಿನ ಒಂದಿಬ್ಬರು ಹಿರಿಯ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಾ ಬಂದಿರುವ ಶಿವಕುಮಾರ್, ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ಪಡೆದು ಮುನ್ನಡೆಯುವ ಪ್ರಯತ್ನ ನಡೆಸಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಿಂದ ಆರಂಭವಾಗಿರುವ ಈ ಭೇಟಿ ಕಾರ್ಯಕ್ರಮ, ನಿರಂತರವಾಗಿ ನಡೆದುಕೊಂಡು ಬಂದಿದೆ.

ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮಠಕ್ಕೆ ಹಾಗೂ ಸಂಜೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಅವರು, ಶ್ರೀಗಳಿಂದ ಆಶೀರ್ವಾದ ಪಡೆದು ವಾಪಸ್ ಆಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.