ETV Bharat / city

ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಿಸಲು ಸಚಿವ ಸುರೇಶ್ ಕುಮಾರ್ ಸೂಚನೆ‌ - ಕೋವಿಡ್-19 ಸಾಂಕ್ರಾಮಿಕ

ಕಳೆದ ಮೂರು ತಿಂಗಳಿನಿಂದ ಸತತವಾಗಿ ಹಾಗೂ ರಜೆ ರಹಿತವಾಗಿ ಉಪನ್ಯಾಸಕರು ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ದಸರಾ ರಜೆ ಘೋಷಿಸಲು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

suresh kumar
suresh kumar
author img

By

Published : Oct 16, 2020, 10:50 PM IST

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಇನ್ನಿತರ ಜಿಲ್ಲೆಗಳಲ್ಲಿ ಹಲವು ಉಪನ್ಯಾಸಕರು ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

dasara holiday to teachers
ಸಚಿವ ಸುರೇಶ್ ಕುಮಾರ್ ಸೂಚನೆ‌

ಕಳೆದ ಮೂರು ತಿಂಗಳಿನಿಂದ ಸತತವಾಗಿ ಹಾಗೂ ರಜೆ ರಹಿತವಾಗಿ ಅವರು ಕೋವಿಡ್ ಕಾರ್ಯ ನಿರ್ವಹಿಸುತ್ತಿದ್ದಾರೆ.‌ ಇದರಿಂದಾಗಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ ಎಂದರು.

ಈ ನಿಟ್ಟಿನಲ್ಲಿ ಇದೀಗ ಅಕ್ಟೋಬರ್ 21ರಿಂದ ನವೆಂಬರ್ 1ರವರೆಗೆ ಪದವಿ ಪೂರ್ವ ಶಿಕ್ಷಣ ಉಪನ್ಯಾಸಕರುಗಳಿಗೆ ದಸರಾ ರಜೆ ಘೋಷಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.