ETV Bharat / city

ಛತ್ರ ಬುಕ್​​ ಮಾಡಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು - Daughter and father died in Transformer blast

ಬೆಂಗಳೂರಿನ ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

daughter-and-father-dead-in-power-transformer-blast-case
ಟ್ರಾನ್ಸ್​ಫಾರ್ಮರ್​ ಸ್ಫೋಟ: ಚಿಕಿತ್ಸೆ ಫಲಿಸದೆ ಅಪ್ಪ, ಮಗಳು ಸಾವು
author img

By

Published : Mar 24, 2022, 9:57 AM IST

Updated : Mar 24, 2022, 12:09 PM IST

ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್​ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್​ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು‌. ಟ್ರಾನ್ಸ್​ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮುಂದಿನ ವಾರ ಚೈತನ್ಯಳ ನಿಶ್ಚಿತಾರ್ಥ ನಿಗದಿಯಾಗಿತ್ತಲ್ಲದೆ, ಕೆಲ ದಿನಗಳಲ್ಲೇ ಮದುವೆ ಸಮಾರಂಭ ನಡೆಯಬೇಕಿತ್ತು.

ಛತ್ರ ಬುಕ್​​ ಮಾಡಿ ಬರುತ್ತಿದ್ದಾಗಲೇ ಟ್ರಾನ್ಸ್​ಫಾರ್ಮರ್​ ಸ್ಫೋಟ

ಮದುವೆಗೆ ಕಲ್ಯಾಣ ಮಂಟಪವೊಂದನ್ನು ಬುಕ್​ ಮಾಡಿಕೊಂಡು ಸ್ಕೂಟಿಯಲ್ಲಿ ನೈಸ್‌ರಸ್ತೆಯ ಮಂಗನಹಳ್ಳಿ ಬಳಿ ಬರುತ್ತಿದ್ದಾಗ, ವಿದ್ಯುತ್​ ಪರಿವರ್ತಕ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತ್ತು. ಸ್ಥಳೀಯರು ಕೂಡಲೇ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅವಘಡದಿಂದ ಇಬ್ಬರನ್ನೂ ಕಳೆದುಕೊಂಡು ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸಶ್ಮಾನ ಮೌನ ಆವರಿಸಿದೆ. ನಿನ್ನೆ ನಡೆದ ದುರಂತದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಹಿಂದೂಗಳು ಮಟನ್ ಸ್ಟಾಲ್ ಇಟ್ಟರೆ ಮುಸ್ಲಿಮರು ಅಲ್ಲಿ ಮಾಂಸ ಖರೀದಿ ಮಾಡ್ತಾರಾ?: ಸಿ.ಟಿ ರವಿ

Last Updated : Mar 24, 2022, 12:09 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.