ETV Bharat / city

'ಬಿಬಿಎಂಪಿ ಸದಸ್ಯರಿಗೆ ಮತದಾನಕ್ಕೆ ಅವಕಾಶವಿಲ್ಲ, ವೋಟಿಂಗ್‌ಗೆ ಬ್ಯಾಲೆಟ್‌ ಪೇಪರ್‌ ಬಳಕೆ' - ವಿಧಾನ ಪರಿಷತ್ ಚುನಾವಣೆ

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಬಿಎಂಪಿ ಸದಸ್ಯರಿಗೆ ಮತದಾನಕ್ಕೆ ಅವಕಾಶವಿಲ್ಲ. ಒಟ್ಟು 2,073 ಮಂದಿ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದ್ದಾರೆ.

ಜೆ. ಮಂಜುನಾಥ್
ಜೆ. ಮಂಜುನಾಥ್
author img

By

Published : Dec 8, 2021, 12:50 PM IST

ಬೆಂಗಳೂರು: ಡಿಸೆಂಬರ್ 10ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ಸದಸ್ಯರಿಗೆ ಮತದಾನಕ್ಕೆ ಅವಕಾಶ ಇಲ್ಲ. ನಗರಸಭೆ, ಗ್ರಾಮ ಪಂಚಾಯತಿ ಸದಸ್ಯರು ಮತದಾನ ಮಾಡುತ್ತಾರೆ. ಒಟ್ಟು 2,073 ಮಂದಿ ಮತದಾರರಿದ್ದಾರೆ. ಪುರುಷರು- 955, ಮಹಿಳೆಯರು- 1077 ಹಾಗೂ ಇತರೆ ಒಬ್ಬರು ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದಾರೆ ಎಂದರು.

ಮತಗಟ್ಟೆ ವಿವರ:

ಒಟ್ಟು 86 ಮತಗಟ್ಟೆಗಳಿವೆ. ಐದು ತಾಲೂಕು ಬೆಂಗಳೂರು ನಗರ ವಿಧಾನ ಪರಿಷತ್ ಕ್ಷೇತ್ರ ವ್ಯಾಪ್ತಿಯಲ್ಲಿ ಬರಲಿದೆ. ಬೆಂಗಳೂರು ಉತ್ತರದಲ್ಲಿ 11, ಯಲಹಂಕದಲ್ಲಿ 18, ಬೆಂಗಳೂರು ದಕ್ಷಿಣದಲ್ಲಿ 15, ಬೆಂಗಳೂರು ಪೂರ್ವದಲ್ಲಿ 11, ಆನೆಕಲ್ (83 ಗ್ರಾಮ ಪಂಚಾಯತಿ, 3 ಪುರಸಭೆ) 28+3 ಮತಗಟ್ಟೆಗಳಿವೆ. 38 ಸೂಕ್ಷ್ಮ, 03 ಅತಿ ಸೂಕ್ಷ್ಮ ಹಾಗೂ 45 ಸಾಮಾನ್ಯ ಕ್ಷೇತ್ರಗಳೆಂದು ಗುರುತಿಸಿದ್ದೇವೆ ಎಂದು ತಿಳಿಸಿದರು.

ಒಟ್ಟು ನಾಲ್ವರು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇವರಲ್ಲಿ ಒಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಎರಡು ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಜತೆ ಒಬ್ಬ ಪಕ್ಷೇತರ ಅಭ್ಯರ್ಥಿ ಕಣದಲ್ಲಿದ್ದಾರೆ. ಬ್ಯಾನರ್, ಪೋಸ್ಟರ್ ಅಳವಡಿಕೆ ಸಂಬಂಧ ಮೂರು ಪ್ರಕರಣ ದಾಖಲಾಗಿದೆ. ಒಂದು ಕಡೆ ಅಭ್ಯರ್ಥಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿದೆ. ಬಹುತೇಕ ಎಲ್ಲಾ ಸಿಬ್ಬಂದಿ ಹಾಗೂ ಸದಸ್ಯರಿಗೆ ಕೋವಿಡ್ ವ್ಯಾಕ್ಸಿನೇಷನ್‌ ಆಗಿದೆ. ಐವರು ಗರ್ಭಿಣಿ ಸದಸ್ಯೆಯರು ಎರಡನೇ ಡೋಸ್ ಲಸಿಕೆ ಪಡೆದಿಲ್ಲ. ಅವರಿಗೆ ಮತದಾನಕ್ಕೆ ಅವಕಾಶ ನೀಡಿದ್ದೇವೆ. 17 ಬಿಎಂಟಿಸಿ ಬಸ್​ಗಳನ್ನು ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯಲು ನಿಯೋಜಿಸಲಾಗಿದೆ. ಒಟ್ಟು ಐದು ತಾಲೂಕುಗಳಲ್ಲಿ 14 ಸೆಕ್ಟರಲ್ ಅಧಿಕಾರಿಗಳು ಹಾಗೂ 15 ಎಂಸಿಸಿ ತಂಡವನ್ನು ರಚಿಸಲಾಗಿದೆ ಎಂದರು.

ಮತದಾನದ ವೇಳೆ ಇವಿಎಂ ಯಂತ್ರ ಬಳಸುತ್ತಿಲ್ಲ. ಬ್ಯಾಲೆಟ್ ಪೇಪರ್ ಬಳಸಲಾಗುತ್ತಿದೆ. ವ್ಯವಸ್ಥಿತವಾಗಿ ಚುನಾವಣೆ ನಡೆಸುತ್ತೇವೆ. ಮತದಾನ ಡಿ.10 ರಂದು ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ‌ ನಡೆಸುತ್ತೇವೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಡಿ.14 ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.