ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹೆಚ್ಚಾಗಿ ಹರಡುತ್ತಿರುವುದರಿಂದ 10 ಜಿಲ್ಲೆಗಳಲ್ಲಿ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಕಾರ್ಯಕ್ರಮವನ್ನು ತಕ್ಷಣದಿಂದ ಸ್ಥಗಿತಗೊಳಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಅದರಂತೆ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೀದರ್, ದಕ್ಷಿಣಕನ್ನಡ, ಹಾಸನ, ಕಲಬುರಗಿ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ರದ್ದಾಗಲಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಕೆಳಮಟ್ಟದ ಎಲ್ಲಾ ಅಧಿಕಾರಿಗಳು ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮ ವಾಸ್ತವ್ಯ ಮಾಡುವಂತೆ ತಿಳಿಸಲಾಗಿತ್ತು. ಆದರೆ, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದರಿಂದ ಕೋವಿಡ್ ಸಾಂಕ್ರಾಮಿಕ ರೋಗ ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಗ್ರಾಮವಾಸ್ತವ್ಯ ರದ್ದು ಮಾಡಲಾಗಿದೆ.
ಓದಿ: ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ 'ಪ್ರಶಂಸನಾ ಪತ್ರ' ಪಡೆದ ವೈದ್ಯಾಧಿಕಾರಿ!