ETV Bharat / city

ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ: ಡಿಸಿಎಂ ಅಶ್ವತ್ಥ್ ನಾರಾಯಣ

ಪ್ರತಿ ಬಾರಿ ಆದಾಯ ತೆರಿಗೆ ಇಲಾಖೆ, ಸಿಬಿಐ ದಾಳಿ ನಡೆಸಿದರೆ ಅದು ಬಿಜೆಪಿಯೇ ಮಾಡಿಸಿದ್ದು ಎಂದು ಗೂಬೆ ಕೂರಿಸುವುದು ಸರಿಯಲ್ಲ ಎಂದು ಪ್ರತಿಪಕ್ಷಗಳಿಗೆ ಡಿಸಿಎಂ ಅಶ್ವತ್ಥ್ ನಾರಾಯಣ ತಿರುಗೇಟು ನೀಡಿದ್ದಾರೆ.

DCM Ashwath Narayana
ಡಿಸಿಎಂ ಅಶ್ವತ್ಥ್ ನಾರಾಯಣ
author img

By

Published : Nov 5, 2020, 3:04 PM IST

ಬೆಂಗಳೂರು: ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅಭಿಪ್ರಾಯಪಟ್ಟಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ವಿನಯ್‌ ಕುಲಕರ್ಣಿ ಅವರ ಮೇಲೆ ಆರೋಪವಿತ್ತು. ಆ ಕೊಲೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ - ಧಾರವಾಡದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಆ ಹೋರಾಟಗಳಿಗೆ ಮಣಿದು ಕಾಂಗ್ರೆಸ್‌ ಸರ್ಕಾರವೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಇದರಲ್ಲಿ ಬಿಜೆಪಿ ಸರ್ಕಾರದ ಪಾತ್ರವೇನಿದೆ ಎಂದು ಪ್ರಶ್ನಿಸಿದರು.

ಪ್ರತಿಸಲವೂ ಯಾರ ಮೇಲಾದರೂ ಆದಾಯ ತೆರಿಗೆ, ಇ.ಡಿ ಅಥವಾ ಸಿಬಿಐ ದಾಳಿ ನಡೆದರೆ ಇಲ್ಲವೇ ಯಾರನ್ನಾದರೂ ಬಂಧಿಸಿದರೆ ಅದೆಲ್ಲಕ್ಕೂ ರಾಜಕೀಯ ದ್ವೇಷ ಎಂದು ಬಣ್ಣಕಟ್ಟಿ ಬಿಜೆಪಿ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎರಡೂ ಕಡೆ ಬಿಜೆಪಿ ಗೆಲ್ಲುತ್ತದೆ:

ಉಪ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ. ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಈ ಬಾರಿ ಕಮಲವೇ ಅರಳಲಿದೆ ಎಂದ ಡಿಸಿಎಂ, ಮತದಾರರು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ತಮ್ಮ ತೀರ್ಪು ನೀಡಿದ್ದಾರೆ. ಆ ತೀರ್ಪು ಏನೆಂಬುದು ನವೆಂಬರ್‌ ಹತ್ತರಂದು ಗೊತ್ತಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.