ETV Bharat / city

ಒಕ್ಕಲಿಗರ ಮೀಸಲಾತಿ ಬೇಡಿಕೆ ತಪ್ಪೇನಲ್ಲ: ಡಿಸಿಎಂ ಅಶ್ವತ್ಥ ನಾರಾಯಣ್

ಮಡಿವಾಳ, ಲಿಂಗಾಯತ, ಕುರುಬ, ಒಕ್ಕಲಿಗ ಸೇರಿದಂತೆ ಎಲ್ಲಾ ಜಾತಿ ಜನಾಂಗದಲ್ಲೂ ಬಡತನ, ಹಿಂದುಳಿದ ವರ್ಗ ಬಹಳಷ್ಟು ಇದೆ. ಹಾಗಾಗಿ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯುವ ಕಾರ್ಯ ನಡೆಯುತ್ತಿದೆ. ಒಕ್ಕಲಿಗರು ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ, ನ್ಯಾಯ ಬದ್ಧವಾಗಿ ಬೇಡಿಕೆ ಮಂಡಿಸುತ್ತಿದ್ದಾರೆ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

ಡಿಸಿಎಂ ಅಶ್ವತ್ಥ ನಾರಾಯಣ್
ಡಿಸಿಎಂ ಅಶ್ವತ್ಥ ನಾರಾಯಣ್
author img

By

Published : Feb 7, 2021, 1:31 PM IST

ಬೆಂಗಳೂರು: ಮೀಸಲಾತಿಗಾಗಿ ವಿವಿಧ ಸಮುದಾಯಗಳು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದು, ಅದರಂತೆ ಒಕ್ಕಲಿಗರು ಕೂಡ ತಮ್ಮನ್ನು ಪ್ರವರ್ಗ 2ಎಗೆ ಸೇರಿಸುವ ಬೇಡಿಕೆ ಇರಿಸುತ್ತಿದ್ದಾರೆ, ಇದರಲ್ಲಿ ತಪ್ಪೇನಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥ ನಾರಾಯಣ್

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಡಿವಾಳ, ಲಿಂಗಾಯತ, ಕುರುಬ, ಒಕ್ಕಲಿಗ ಸೇರಿದಂತೆ ಎಲ್ಲಾ ಜಾತಿ ಜನಾಂಗದಲ್ಲೂ ಬಡತನ, ಹಿಂದುಳಿದ ವರ್ಗ ಬಹಳಷ್ಟು ಇದೆ. ಹಾಗಾಗಿ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯುವ ಕಾರ್ಯ ನಡೆಯುತ್ತಿದೆ. ಸರ್ಕಾರದ ಮೇಲೆ ಒತ್ತಾಯ ತಂದಾಗ ಇನ್ನಷ್ಟು ಹೆಚ್ಚಿನ ರೀತಿ ಸವಲತ್ತು, ನ್ಯಾಯ ಪಡೆಯಲು ಸಾಧ್ಯವಾಗುತ್ತದೆ ಎನ್ನುವ ಕಲ್ಪನೆಯಿಂದ ಎಲ್ಲಾ ಜಾತಿ ಜನಾಂಗದವರು ಒಳಮೀಸಲಾತಿ ಕೇಳುತ್ತಿದ್ದಾರೆ. ಪರಿಶಿಷ್ಟ ಜಾತಿಗೆ ಸೇರ್ಪಡೆಯಾಗಬೇಕು ಎನ್ನುವ ಬಯಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಮೀಸಲಾತಿ ಬೇಡಿಕೆಯನ್ನು ಸಮರ್ಥಿಸಿಕೊಂಡರು.

ಮೀಸಲಾತಿ ಬೇಡಿಕೆ ಕುರಿತು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಅಧ್ಯಯನ ಮಾಡಿ, ಯಾರಿಗೆ ಏನು ಸವಲತ್ತು ಕಲ್ಪಿಸಲು ಸಾಧ್ಯವಿದೆ ಎಂದು ಪರಿಶೀಲನೆ ಮಾಡಿ ನಂತರ ಬೇಡಿಕೆ ಈಡೇರಿಸುವ ಕುರಿತಂತೆ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಎಲ್ಲಾ ವರ್ಗದ ಎಲ್ಲ ಜನರಿಗೂ ನ್ಯಾಯ ಸಿಗಬೇಕು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಜ್ಜೆ ಇಡಲಿದೆ ಎಂದರು.

ಒಕ್ಕಲಿಗ ಸಮುದಾಯದ ಬೇಡಿಕೆ ಕುರಿತು ಪ್ರತಿಕ್ರಿಯೆ ನೀಡಿದ ಡಿಸಿಎಂ, ಯಾರೇ ಬೇಡಿಕೆ ಕೇಳಿದಾಗ, ಬೇಡಿಕೆಯನ್ನು ನ್ಯಾಯದ ಆಧಾರದಲ್ಲಿ ಪರಿಶೀಲನೆ ಮಾಡಬೇಕಾಗುತ್ತದೆ. ಅವರು ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ, ನ್ಯಾಯ ಬದ್ಧವಾಗಿ ಬೇಡಿಕೆ ಮಂಡಿಸುತ್ತಿದ್ದಾರೆ. ಅವರ ಮಂಡನೆಯನ್ನು ಗೌರವಿಸಿ, ಸರ್ಕಾರ ಯಾವ ರೀತಿ ಅಧ್ಯಯನ ನಡೆಸಬೇಕು, ಯಾವ ರೀತಿ ಪರಿಶೀಲಿಸಬೇಕು ಎಂದು ನಿರ್ಧರಿಸಲಿದೆ. ಸಮಾಜದಲ್ಲಿ ಎಲ್ಲರೂ ಅನ್ಯೋನ್ಯವಾಗಿ ಬದುಕುವ ರೀತಿ ಎಲ್ಲರಿಗೂ ಅವಕಾಶ ಕೊಡುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಆಗಲಿದೆ. ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಸ್ಪರ್ಧೆ ಮಾಡುವ ಅವಶ್ಯಕತೆ ಇರಲಿಲ್ಲ, ಆದರೂ ಅವರು ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಗೆ ಎಲ್ಲರಿಗೂ ಅವಕಾಶವಿದೆ. ಅವರಿಗೆ ನಿಲ್ಲಬೇಡಿ ಎನ್ನಲು ಸಾಧ್ಯವಿಲ್ಲ. ಆದರೆ ಬಸವರಾಜ ಹೊರಟ್ಟಿ ಅವರಿಗೆ ಅಗತ್ಯ ಸಂಖ್ಯಾಬಲ ಇದೆ. ಕಾಂಗ್ರೆಸ್​ನವರು ಸ್ಪರ್ಧೆಯಿಂದ ಹಿಂಪಡೆದು ಅವಿರೋಧ ಆಯ್ಕೆಗೆ ಅವಕಾಶ ಮಾಡಲಿ ಎಂದು ಕಿವಿಮಾತು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.