ETV Bharat / city

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಂತರ ಕರ್ನಾಟಕ ದೇಶದಲ್ಲೇ ನಂ.1 ರಾಜ್ಯವಾಗಲಿದೆ: ಡಿಸಿಎಂ ಅಶ್ವತ್ಥ್‌ ನಾರಾಯಣ

author img

By

Published : Dec 12, 2020, 1:28 PM IST

ದೇಶವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ಸುಲಭ ಪರಿಹಾರೋಪಾಯಗಳು ಸಿಗುವುದು ಶಿಕ್ಷಣದಲ್ಲಿ ಮಾತ್ರ. ನನ್ನ ಪ್ರಕಾರ ಶಿಕ್ಷಣದಿಂದಲೇ ಸರ್ವ ಸಮಸ್ಯೆಗಳಿಗೂ ಪರಿಹಾರವಿದೆ. ಸಮಾಜದ ಎಲ್ಲ ಹಂತಗಳಿಗೂ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಕೊಂಡೊಯ್ದರೆ ಎಲ್ಲ ಕ್ಷೇತ್ರಗಳಲ್ಲೂ ಗುರುತರ ಬದಲಾವಣೆ ಕಂಡು ಬರುತ್ತದೆ..

Deputy Chief Minister Dr.CN Ashwaththanarayana
ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು : ಐಟಿ-ಬಿಟಿ, ತಂತ್ರಜ್ಞಾನ ಸೇರಿ ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಕೆಲವೇ ವರ್ಷಗಳಲ್ಲಿ ಕೃಷಿ, ಕೈಗಾರಿಕೆ, ಸೇವೆ ಮತ್ತು ಆರೋಗ್ಯ ಸೇರಿ ಎಲ್ಲ ಕ್ಷೇತ್ರಗಳಲ್ಲೂ ನಂ.1 ರಾಜ್ಯವಾಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದ್ದಾರೆ.

ಇಂದು ಸಿಎಂಆರ್‌ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವರ್ಚುಯಲ್‌ ವೇದಿಕೆ ಮೂಲಕ ಭಾಷಣ ಮಾಡಿದ ಅವರು, ಅತ್ಯಂತ ದೂರದೃಷ್ಟಿಯಿಂದ ರೂಪಿಸಲ್ಪಟ್ಟಿರುವ ಶಿಕ್ಷಣ ನೀತಿಯು ಭಾರತಕ್ಕೆ ಹೊಸ ದಿಕ್ಕು ತೋರಲಿದೆ. ಮುಖ್ಯವಾಗಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ ತಂದು ಕೊಡಲಿದೆ. ನೀತಿಯ ಕರಡು ಸಮಿತಿಯಲ್ಲಿ ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದರು.

ಸದ್ಯಕ್ಕೆ ಕರ್ನಾಟಕವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ಸಂಶೋಧನೆ ಸೇರಿ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಸಾಂಪ್ರದಾಯಿಕ ಹಾಗೂ ಅಕಾಡೆಮಿಕ್‌ ಆಧಾರಿತ ಶಿಕ್ಷಣದ ಸ್ವರೂಪವು ಅಮೂಲಾಗ್ರವಾಗಿ ಬದಲಾಗಲಿದೆ. ಆ ಮೂಲಕ ಮುಂದಿನ ದಿನಗಳಲ್ಲಿ ಕೈಗಾರಿಕೆ, ಕೃಷಿ, ತೋಟಗಾರಿಕೆ, ನೀರಾವರಿ, ಆರೋಗ್ಯ ಸೇವೆ, ಸಾರಿಗೆ ಸೇರಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಕರ್ನಾಟಕ ಅಚ್ಚರಿಯ ರೀತಿ ಅಭಿವೃದ್ಧಿ ಹೊಂದಲಿದೆ.

ದೇಶವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ಸುಲಭ ಪರಿಹಾರೋಪಾಯಗಳು ಸಿಗುವುದು ಶಿಕ್ಷಣದಲ್ಲಿ ಮಾತ್ರ. ನನ್ನ ಪ್ರಕಾರ ಶಿಕ್ಷಣದಿಂದಲೇ ಸರ್ವ ಸಮಸ್ಯೆಗಳಿಗೂ ಪರಿಹಾರವಿದೆ. ಸಮಾಜದ ಎಲ್ಲ ಹಂತಗಳಿಗೂ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಕೊಂಡೊಯ್ದರೆ ಎಲ್ಲ ಕ್ಷೇತ್ರಗಳಲ್ಲೂ ಗುರುತರ ಬದಲಾವಣೆ ಕಂಡು ಬರುತ್ತದೆ ಎಂದರು.

ಓದಿ: ದಾಖಲೆ ಬೆಲೆಗೆ ಕಿಲಾರಿ ಹೋರಿ ಮಾರಾಟ! ತವರುಮನೆಗೆ ಮಗಳ ಕೊಡುವ ರೀತಿ ಬೀಳ್ಕೊಟ್ಟ ರೈತ!

ಕಾರ್ಯಪಡೆ ರಚನೆ : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಮೊದಲ ರಾಜ್ಯ ಕರ್ನಾಟಕವೇ ಆಗಬೇಕು ಎಂಬ ಉದ್ದೇಶದಿಂದ ನೀತಿಯ ಕರಡು ಪ್ರತಿ ಕೈಸೇರಿದ ಕೂಡಲೇ ಕಾರ್ಯಪಡೆ ರಚಿಸಿ ನೀತಿಯ ಜಾರಿಗೆ ಅಗತ್ಯ ಮಾರ್ಗಸೂಚಿ ನೀಡುವಂತೆ ಕೋರಲಾಗಿತ್ತು. ಅದರಂತೆ ಕಾರ್ಯಪಡೆ ಈಗಾಗಲೇ ವರದಿ ನೀಡಿದೆ. ಸದ್ಯಕ್ಕೆ ಸರ್ಕಾರವು ಈ ಶಿಫಾರಸ್ಸುಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲು ಬೇಕಿರುವ ಆಡಳಿತಾತ್ಮಕ, ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುವ ಕೆಲಸದಲ್ಲಿ ನಿರತವಾಗಿದೆ. 2021ರಿಂದಲೇ ಹಂತ-ಹಂತವಾಗಿ ನೀತಿಯನ್ನು ಜಾರಿ ಮಾಡಲಾಗುತ್ತಿದೆ. ಬೋಧನೆ, ಸಂಶೋಧನೆಗೆ ಹೆಚ್ಚು ಒತ್ತು ನೀಡಬಲ್ಲ, ಕೇವಲ ಜ್ಞಾನದಿಂದಲೇ ರಾಜ್ಯವನ್ನು ಮೇಲೆತ್ತಬಲ್ಲ ದೊಡ್ಡ ಪ್ರಯತ್ನಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.