ETV Bharat / city

ಪ್ರವಾಹದಿಂದ ಇಲಾಖೆಗೆ 2,030 ಕೋಟಿ ರೂ. ಹಾನಿ : ಡಿಸಿಎಂ ಕಾರಜೋಳ

ತುರ್ತಾಗಿ ಸಂಪರ್ಕ ಕಲ್ಪಿಸಬೇಕಾದ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕಿದೆ. ಹಾನಿ ವಿವರ ಹಾಗೂ ಪುನರ್​ ನಿರ್ಮಾಣ ಕಾಮಗಾರಿಗಳ ಕುರಿತ ಸಮಗ್ರ ವಿವರವನ್ನು ರಾಜ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸಚಿವ ಸಂಪುಟ ಶಾಖೆಗೆ ಕೂಡಲೇ ಸಲ್ಲಿಸಬೇಕು. ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು, ಸಾರ್ವಜನಿಕ ಸಂಪರ್ಕಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದ್ದಾರೆ.

DCM govind karjol
ಡಿಸಿಎಂ ಕಾರಜೋಳ
author img

By

Published : Aug 27, 2020, 4:40 PM IST

ಬೆಂಗಳೂರು : ರಾಜ್ಯದಲ್ಲಿ ಪ್ರವಾಹದಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 2,032 ಕೋಟಿ ರೂ. ಮೊತ್ತದ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಳಗಾಗಿವೆ. ತುರ್ತಾಗಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು 478 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರವಾಹದಿಂದ ಆಗಿರುವ ಹಾನಿ ವಿವರ, ಹಾಗೂ ತುರ್ತು ಕಾಮಗಾರಿಗಳ ಕುರಿತು ಡಿಸಿಎಂ ಚರ್ಚಿಸಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ಭೀಕರ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದಾಗಿ ಲೋಕೋಪಯೋಗಿ ಇಲಾಖೆಯ ರಸ್ತೆಗಳು, ಸೇತುವೆಗಳು ಹಾಗೂ ಕಟ್ಟಡಗಳು ದುರಸ್ತಿಗೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಂಪರ್ಕಕ್ಕೆ ತೊಂದರೆಯಾಗಿದೆ. ಉತ್ತರ ವಲಯದಲ್ಲಿ 1,437 ಕೋಟಿ, ಕೇಂದ್ರ ವಲಯದಲ್ಲಿ 135, ದಕ್ಷಿಣ ವಲಯದಲ್ಲಿ 181, ಈಶಾನ್ಯ ವಲಯದಲ್ಲಿ 71 ಹಾಗೂ ರಾಷ್ಟ್ರೀಯ ಹೆದ್ದಾರಿಯ 26 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಳಗಾಗಿವೆ ಎಂದರು.

DCM govind karjol meeting
ಡಿಸಿಎಂ ಕಾರಜೋಳ ಸಭೆ

ತುರ್ತಾಗಿ ಸಂಪರ್ಕ ಕಲ್ಪಿಸಬೇಕಾದ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕಿದೆ. ಹಾನಿ ವಿವರ ಹಾಗೂ ಪುನರ್​​ ನಿರ್ಮಾಣ ಕಾಮಗಾರಿಗಳ ಕುರಿತ ಸಮಗ್ರ ವಿವರವನ್ನು ರಾಜ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸಚಿವ ಸಂಪುಟ ಶಾಖೆಗೆ ಕೂಡಲೇ ಸಲ್ಲಿಸಬೇಕು. ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು, ಸಾರ್ವಜನಿಕ ಸಂಪರ್ಕಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್, ಪ್ರವಾಹದಿಂದ ಆಗಿರುವ ಹಾನಿ ಹಾಗೂ ಪುನರ್​​ ನಿರ್ಮಾಣ ಕಾಮಗಾರಿಗಳ ವಿವರವನ್ನು ವಿಸೃತವಾಗಿ ವಿವರಿಸಿದರು.

ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯ ಅಭಿಯಂತರರಾದ ಶಿವಯೋಗಿ ಹಿರೇಮಠ, ಕಾರ್ಯನಿರ್ವಹಕ ಅಭಿಯಂತರರಾದ ಜಿ.ಪಿ.ಕುಮಾರ್, ಉಪಕಾರ್ಯದರ್ಶಿ ವಿಜಯ ಕುಮಾರಿ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.